Friday, May 17, 2024
spot_imgspot_img
spot_imgspot_img

ಪುತ್ತೂರು: ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳುತ್ತಿರುವ ವಿವೇಕಾನಂದ ಪ.ಪೂ ಕಾಲೇಜಿನ ಹಿರಿಯ ವಿದ್ಯಾರ್ಥಿ ಗೌತಮ್ ಎ.ಪಿ ಯವರಿಗೆ ಸನ್ಮಾನ

- Advertisement -G L Acharya panikkar
- Advertisement -

ಪುತ್ತೂರು: ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳುತ್ತಿರುವ ವಿವೇಕಾನಂದ ಪದವಿಪೂರ್ವ ಕಾಲೇಜಿನ ಹಿರಿಯ ವಿದ್ಯಾರ್ಥಿ ಗೌತಮ್ ಎ.ಪಿ ಅವರನ್ನು ಸಂಸ್ಥೆಯ ವತಿಯಿಂದ ವಿಶೇಷವಾಗಿ ಸನ್ಮಾನಿಸಲಾಯಿತು.

ಇದನ್ನೂ ಓದಿ: ಮಂಗಳೂರು : ಅಕ್ರಮ ವಾಸ್ತವ್ಯ ಹೊಂದಿದ್ದ 38 ಮಂದಿ ಶ್ರೀಲಂಕಾ ಪ್ರಜೆಗಳು ಪರಪ್ಪನ ಅಗ್ರಹಾರಕ್ಕೆ; ಎನ್‌ಐಎಯಿಂದ ತನಿಖೆ ಆರಂಭ

ಕಾಲೇಜಿನ ಪ್ರಾಂಶುಪಾಲ ಮಹೇಶ ನಿಟಿಲಾಪುರ ಗೌತಮ್ ಎ.ಪಿ ವರಿಗೆ ಶಾಲು ಹೊದಿಸಿ, ಸ್ಮರಣಿಕೆ ನೀಡಿ ಸನ್ಮಾನಿಸಿದರು. ಇದೇ ಸಂದರ್ಭದಲ್ಲಿ ಪ್ರಥಮ ಪಿಯುಸಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳೊಡನೆ ಆನ್ ಲೈನ್ ವೇದಿಕೆಯ ಮೂಲಕ ತಮ್ಮ ಅನುಭವಗಳನ್ನು ಹಂಚಿಕೊಂಡರು.

ಗೌತಮ್ ಎ.ಪಿ ಯವರು ತಮ್ಮ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣವನ್ನು ತೆಂಕಿಲದ ವಿವೇಕಾನಂದ ವಿದ್ಯಾ ಸಂಸ್ಥೆಯಲ್ಲಿ ,ಪಿಯುಸಿ ಶಿಕ್ಷಣವನ್ನು ವಿವೇಕಾನಂದ ಪದವಿಪೂರ್ವ ಕಾಲೇಜಿನಲ್ಲಿ ಪಡೆದು ಬಳಿಕ ಮದ್ರಾಸ್ ನ ಐ.ಐ.ಟಿ ಸಂಸ್ಥೆಯಲ್ಲಿ ಇಂಟಿಗ್ರೇಟೆಡ್ ಬಿ.ಎಸ್-ಎಂ.ಎಸ್ ಪದವಿಯನ್ನು ಪಡೆದಿರುತ್ತಾರೆ. ಈ ಅವಧಿಯಲ್ಲಿ ಡಾರ್ಕ್ ಮ್ಯಾಟರ್ (Dark matter) ಎಂಬ ವಿಷಯದ ಕುರಿತು ಪ್ರಬಂಧ ಮಂಡಿಸಿರುತ್ತಾರೆ.

ಇದನ್ನೂ ಓದಿ: ಮಂಗಳೂರು: ಗೋಡೆ ಕೊರೆದು ಜುವೆಲ್ಲರಿ ಶಾಪ್ ಗೆ ನುಗ್ಗಿದ ದರೋಡೆಕೋರರು; ಚಿನ್ನಾಭರಣ ಕಳವು!

ಪ್ರಸ್ತುತ ಪಿ.ಎಚ್‌ಡಿ ಪದವಿಗಾಗಿ ಅಮೇರಿಕಾದ ಜಾನ್ಸ್ ಹಾಫ್‌ಕಿನ್ಸ್ ವಿಶ್ವವಿದ್ಯಾಲಯದಲ್ಲಿ Particle Physics (Cosmology) ಎಂಬ ವಿಷಯದ ಕುರಿತು ಉನ್ನತ ಶಿಕ್ಷಣಕ್ಕಾಗಿ ವಿದೇಶಕ್ಕೆ ತೆರಳಲಿದ್ದಾರೆ. ಇವರು ಪುತ್ತೂರಿನ ಸಂತ ಫಿಲೋಮಿನ ಪದವಿ ಕಾಲೇಜಿನ ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಡಾ. ಎ.ಪಿ.ರಾಧಕೃಷ್ಣ ಮತ್ತು ಎ.ಪಿ. ಸೀತಾಲಕ್ಷ್ಮಿ ದಂಪತಿಗಳ ಪುತ್ರ.

ಕಾರ್ಯಕ್ರಮದಲ್ಲಿ ಪ್ರಾಂಶುಪಾಲ ಮಹೇಶ ನಿಟಿಲಾಪುರ, ಭೌತಶಾಸ್ತ್ರ ವಿಭಾಗದ ಮುಖ್ಯಸ್ಥ ಹರೀಶ ಶಾಸ್ತ್ರೀ, ರಸಾಯನಶಾಸ್ತ್ರ ವಿಭಾಗದ ಮುಖ್ಯಸ್ಥೆ ನಳಿನ ಕುಮಾರಿ, ಆಂಗ್ಲ ವಿಭಾಗದ ಮುಖ್ಯಸ್ಥ ಪರಮೇಶ್ವರ ಶರ್ಮ, ಇಲೆಕ್ಟ್ರಾನಿಕ್ಸ್ ವಿಭಾಗದ ಮುಖ್ಯಸ್ಥ ಭೀಮ ಭಾರದ್ವಾಜ್ , ಉಪನ್ಯಾಸಕ ವಿಶ್ವನಾಥ್ ಮತ್ತಿತರರು ಉಪಸ್ಥಿತರಿದ್ದರು.

driving
- Advertisement -

Related news

error: Content is protected !!