Tuesday, July 21, 2026
spot_imgspot_img
spot_imgspot_img

ಕೇಸರಿ ಶಾಲು ಹೊಸ ಸಂಪ್ರದಾಯ: ಅದಕ್ಕೆ ಅವಕಾಶ ಇಲ್ಲ -ನಾವು ಅನುಮತಿ ಕೊಟ್ಟಿರುವುದು ಹಿಜಾಬ್‌ಗೆ ಮಾತ್ರ-ಕೇಸರಿ ಶಾಲು ಹಾಕಿಕೊಂಡು ಶಾಲೆಗೆ ಬಂದರೆ ಕಠಿಣ ಕ್ರಮ -ಮಧು ಬಂಗಾರಪ್ಪ ಎಚ್ಚರಿಕೆ

- Advertisement -
- Advertisement -

ಬೆಂಗಳೂರು: ಸರ್ಕಾರಿ ಶಾಲೆಗಳಲ್ಲಿ ವಿದ್ಯಾರ್ಥಿಗಳು ಕೇಸರಿ ಶಾಲು ಧರಿಸಲು ಅವಕಾಶ ಇಲ್ಲ. ಯಾರಾದರೂ ಹಾಕಿಕೊಂಡು ಬಂದರೆ ಕಾನೂನಿನ ಪ್ರಕಾರ ಕಠಿಣ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಎಚ್ಚರಿಕೆ ನೀಡಿದ್ದಾರೆ.ಜೂನ್ 1ರಿಂದ ರಾಜ್ಯಾದ್ಯಂತ ಶಾಲೆಗಳು ಆರಂಭವಾಗಲಿದ್ದು, ಮತ್ತೆ ಹಿಜಾಬ್ ಹಾಗೂ ಕೇಸರಿ ಶಾಲು ಸದ್ದು ಮಾಡುತ್ತಿದೆ. ಈ ವಿಚಾರವಾಗಿ ಮಾತನಾಡಿದ ಶಿಕ್ಷಣ ಸಚಿವರು, ಹಿಜಾಬ್‌ ವಿಚಾರದಲ್ಲಿ ನಮಗೆ ಸ್ಪಷ್ಟತೆ ಇದೆ.

ಹಿಜಾಬ್ ಬಗ್ಗೆ ನಾವು ನಮ್ಮ ಪ್ರಣಾಳಿಕೆಯಲ್ಲೇ ಹೇಳಿದ್ದೆವು. ಜನರು ಮತ ಕೊಟ್ಟಿದ್ದಾರೆ, ಅದಕ್ಕಾಗಿ ಅವರ ಋಣ ತೀರಿಸಿದ್ದೇವೆ ಎಂದರು.ಬಿಜೆಪಿಯವರಿಗೆ ಅದು ಹಿಜಾಬ್, ನಮಗೆ ಅದು ಸಮಾನತೆಯ ಸಂಕೇತ. ರಾಜ್ಯ ಸರ್ಕಾರದ ಯಾವುದೇ ಶಾಲೆಗಳಲ್ಲಿ ಕೇಸರಿ ಶಾಲು ಧರಿಸಲು ಅವಕಾಶ ಇಲ್ಲ. ಯಾರಾದರೂ ಹಾಕಿಕೊಂಡು ಬಂದರೆ ಕಾನೂನಿನ ಪ್ರಕಾರ ಕ್ರಮ ತೆಗೆದುಕೊಳ್ಳುತ್ತೇವೆ. ಕೇಂದ್ರೀಯ ವಿದ್ಯಾಲಯದಲ್ಲಿ ಯಾವ ರೂಲ್ಸ್ ಇದೆ ಎಂಬುದನ್ನು ಬಿಜೆಪಿಯವರು ಮೊದಲು ನೋಡಿಕೊಂಡು ಬರಲಿ ಎಂದು ಕಿಡಿಕಾರಿದ್ದಾರೆ.

ಪ್ರಾಥಮಿಕ ತರಗತಿಯಿಂದ 12ನೇ ತರಗತಿಯವರೆಗೆ ಜನಿವಾರ, ಹಿಜಾಬ್, ಶಿವದಾರ, ರುದ್ರಾಕ್ಷಿ ಹಾಕಿಕೊಳ್ಳಬಹುದು. ಈಗಾಗಲೇ ಸಾಂಪ್ರದಾಯಿಕವಾಗಿ ಅನುಸರಿಸುವ ಧಾರ್ಮಿಕ ಸಂಕೇತಗಳನ್ನು ಧರಿಸಬಹುದು. ಆದರೆ ಹೊಸದಾಗಿ ಕೇಸರಿ ಶಾಲು ಧರಿಸುವಂತಿಲ್ಲ ಎಂದು ಸಚಿವರು ಹೇಳಿದ್ದಾರೆ.

- Advertisement -

Related news

error: Content is protected !!