- Advertisement -
- Advertisement -
ಬಂಟ್ವಾಳ: ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯ ಅಕ್ರ: 260/2014ರ ಕಲಂ 306 IPC ಪ್ರಕರಣಕ್ಕೆ ಸಂಬಂಧಿಸಿದಂತೆ, ಹಲವು ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತನನ್ನು ಬಂಟ್ವಾಳ ಕರಿಯಂಗಳ ನಿವಾಸಿ ದುನಿಯಾ ಶರೀಫ್ ಅಲಿಯಾಸ್ ಮಹಮ್ಮದ್ ಶರೀಫ್ (52) ಎಂದು ಗುರುತಿಸಲಾಗಿದೆ. ಪ್ರಕರಣದ ವಿಚಾರಣೆಗೆ ನ್ಯಾಯಾಲಯಕ್ಕೆ ಹಾಜರಾಗದೇ ಆರೋಪಿಯು ವಿದೇಶದಲ್ಲಿ ತಲೆಮರೆಸಿಕೊಂಡಿದ್ದನು.ಇದೀಗ ದಿನಾಂಕ 05-05-2026ರಂದು ವಿದೇಶದಿಂದ ಭಾರತಕ್ಕೆ ಹಿಂದಿರುಗುತ್ತಿದ್ದ ವೇಳೆ, ಮುಂಬೈ ಸಹರಾ ಪೊಲೀಸ್ ಠಾಣೆಯ ಪೊಲೀಸರ ಸಹಕಾರದೊಂದಿಗೆ ಬಂಟ್ವಾಳ ಗ್ರಾಮಾಂತರ ಠಾಣಾ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಬಂಧಿತನನ್ನು ದಿನಾಂಕ 06-05-2026ರಂದು ಮಾನ್ಯ ನ್ಯಾಯಾಧೀಶರ ಮುಂದೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ ಎಂದು ಪೊಲೀಸರು ತಿಳಿಸಿದ್ದಾರೆ.
- Advertisement -








