Monday, July 20, 2026
spot_imgspot_img
spot_imgspot_img

ಸ್ಕೂಟರ್‌ಗೆ ಕ್ರೇನ್ ಢಿಕ್ಕಿ; ಸವಾರ ಸ್ಥಳದಲ್ಲೇ ಮೃತ್ಯು

- Advertisement -
- Advertisement -

ಬೆಳ್ತಂಗಡಿ : ಕ್ರೇನ್ ವಾಹನ ದ್ವಿಚಕ್ರ ವಾಹನದ ಹಿಂಭಾಗಕ್ಕೆ ಢಿಕ್ಕಿ ಹೊಡೆದ ಪರಿಣಾಮ ಸ್ಕೂಟರ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಮಂಗಳವಾರ ಬೆಳ್ತಂಗಡಿ ತಾಲೂಕಿನ ಬೆಳಾಲು ಪೇಟೆಯಲ್ಲಿ ಸಂಭವಿಸಿದೆ.ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಬಳಂಜ ನಿವಾಸಿ ಜಯ ಮೇಸ್ತ್ರಿ(49) ಮೃತಪಟ್ಟರಾಗಿದ್ದಾರೆ. ಇವರು ಬೆಳಾಲು ಗ್ರಾಮದ ಬಳಿ ಬಾಡಿಗೆ ಮನೆಯಲ್ಲಿ ವಾಸವಾಗಿ ರಬ್ಬರ್ ಟ್ಯಾಪಿಂಗ್ ಕೆಲಸ ಮಾಡುತ್ತಿದ್ದರು.

ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯ ಪೊಲೀಸರು ಘಟನಾ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ಮೃತದೇಹವನ್ನು ಬೆಳ್ತಂಗಡಿ ತಾಲೂಕು ಸರಕಾರಿ ಆಸ್ಪತ್ರೆಗೆ ರವಾನಿಸಲಾಗಿದೆ. ಈ ಬಗ್ಗೆ ಬೆಳ್ತಂಗಡಿ ಸಂಚಾರಿ ಪೊಲೀಸ್ ಠಾಣೆಯಲ್ಲಿ ಅಪಘಾತ ಪ್ರಕರಣ ದಾಖಲಾಗಿದೆ.

- Advertisement -

Related news

error: Content is protected !!