Monday, July 20, 2026
spot_imgspot_img
spot_imgspot_img

ನೆಲ್ಯಾಡಿ:ಬೈಕ್-ಕಾರು ಡಿಕ್ಕಿ: ಪತಿ ಸ್ಥಳದಲ್ಲೇ ಮೃತ್ಯು , ಪತ್ನಿ ಗಂಭೀರ ಗಾಯ

- Advertisement -
- Advertisement -

ನೆಲ್ಯಾಡಿ: ಮಂಗಳೂರು-ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಬೈಕ್‌ ಹಾಗೂ ಸ್ವಿಫ್ಟ್ ಕಾರಿನ ನಡುವೆ ಭೀಕರ ಅಪಘಾತ ಸಂಭವಿಸಿ ಬೈಕ್‌ ಸವಾರ ಸ್ಥಳದಲ್ಲೇ ಮೃತಪಟ್ಟು ಸಹಸವಾರ ಪತ್ನಿ ಗಂಭೀರವಾಗಿ ಗಾಯಗೊಂಡ ಘಟನೆ ಭಾನುವಾರ ಅಪರಾಹ್ನ ನಡೆದಿದೆ.ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಬೈಕ್ ಹಾಗೂ ಉಪ್ಪಿನಂಗಡಿಯಿಂದ ಶಿರಾಡಿ ಕಡೆಗೆ ಸಾಗುತ್ತಿದ್ದ ಸ್ವಿಫ್ಟ್ ಕಾರಿನ ನಡುವೆ ಗೋಳಿತ್ತೊಟ್ಟು ಜಂಕ್ಷನ್‌ನಲ್ಲಿ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆಗೆ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಮೃತಪಟ್ಟವರನ್ನು ಅರಸಿನಮಕ್ಕಿ ಹತ್ಯಡ್ಕ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದಲ್ಲಿ ಸರಫಾ ಆಗಿರುವ ಸದಾನಂದ ಆಚಾರ್ (55) ಎಂದು ಗುರುತಿಸಲಾಗಿದೆ.

ಅಪಘಾತದಲ್ಲಿ ಅವರ ಪತ್ನಿ ಉಷಾ ಆಚಾರ್ಯ ಅವರಿಗೆ ಗಂಭೀರ ಗಾಯಗಳಾಗಿದ್ದು, ಅವರನ್ನು ತಕ್ಷಣ ಮಂಗಳೂರಿನ ಆಸ್ಪತ್ರೆಗೆ ಹೆಚ್ಚಿನ ಚಿಕಿತ್ಸೆಗಾಗಿ ಕರೆದೊಯ್ಯಲಾಗಿದೆ.

- Advertisement -

Related news

error: Content is protected !!