Monday, July 20, 2026
spot_imgspot_img
spot_imgspot_img

ಮಂಗಳೂರಿನಲ್ಲಿ ಭಾರೀ ಪ್ರಮಾಣದ MDMA ವಶಕ್ಕೆ –ಯುವಕರನ್ನು ಗುರಿಯಾಗಿಸಿದ್ದ ಇಬ್ಬರು ಡ್ರಗ್ ಪೆಡ್ಲರ್‌ಗಳ ಬಂಧನ

- Advertisement -
- Advertisement -

ಮಂಗಳೂರು, ಏ.19: ನಗರದ ಜೆಪ್ಪಿನಮೊಗರು ಪ್ರದೇಶದಲ್ಲಿ ಬೃಹತ್ ಪ್ರಮಾಣದ MDMA ಮಾದಕ ವಸ್ತುವನ್ನು ಮಾರಾಟ ಮಾಡಲು ಯತ್ನಿಸುತ್ತಿದ್ದ ಇಬ್ಬರು ಡ್ರಗ್ ಪೆಡ್ಲರ್‌ಗಳನ್ನು ಕಂಕನಾಡಿ ನಗರ ಪೊಲೀಸರು ಬಂಧಿಸಿದ್ದಾರೆ.

ಪೊಲೀಸರಿಗೆ ಬಂದ ಖಚಿತ ಮಾಹಿತಿಯ ಆಧಾರದ ಮೇಲೆ ಕಾರ್ಯಾಚರಣೆ ನಡೆಸಿದ ವೇಳೆ, ಕೆಎ-70-ಕೆ-3333 ಸಂಖ್ಯೆಯ ಬಜಾಜ್ ಫ್ರೀಡಂ ದ್ವಿಚಕ್ರ ವಾಹನದಲ್ಲಿ ಮಾದಕ ವಸ್ತು ಸಾಗಿಸುತ್ತಿದ್ದ ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ.ಬಂಧಿತ ಆರೋಪಿಗಳನ್ನು ಮಂಗಳೂರಿನ ಪರ್ವೇಜ್ @ ದಾವೂದ್ ಪರ್ವೇಜ್ (40), ನಜರತ್ ಅಲಿ (37)ಎಂದು ಗುರುತಿಸಲಾಗಿದೆ.ಆರೋಪಿಗಳಿಂದ ರೂ. 46,50,000 ಮೌಲ್ಯದ 465.8 ಗ್ರಾಂ ತೂಕದ MDMA ಮಾದಕ ವಸ್ತುವನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ತನಿಖೆಯಲ್ಲಿ ಪರ್ವೇಜ್ ಮಂಗಳೂರಿನ ಯುವ ಸಮುದಾಯ ಮತ್ತು ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು, ಜಿಲ್ಲೆಯ ಹೊರಗಿನಿಂದ MDMA ತರಿಸಿ ನಗರದಲ್ಲಿ ಮಾರಾಟ ಮತ್ತು ಸರಬರಾಜು ಮಾಡಲು ಯತ್ನಿಸುತ್ತಿದ್ದದ್ದು ಬೆಳಕಿಗೆ ಬಂದಿದೆ.ಈತನ ವಿರುದ್ಧ ಪಾಂಡೇಶ್ವರ, ವಾಮಂಜೂರು, ಬಂದರು ಪೊಲೀಸ್ ಠಾಣೆಗಳ ಜೊತೆಗೆ ಬೆಂಗಳೂರಿನ ಅಮೃತಹಳ್ಳಿ ಹಾಗೂ ಉಡುಪಿ ಸೆನ್ ಪೊಲೀಸ್ ಠಾಣೆಗಳಲ್ಲಿ ಈಗಾಗಲೇ ಪ್ರಕರಣಗಳು ದಾಖಲಾಗಿದ್ದು, ಈತ ರೂಢಿಗತ ಡ್ರಗ್ ಪೆಡ್ಲರ್ ಆಗಿರುವುದು ತಿಳಿದುಬಂದಿದೆ. ನಜರತ್ ಅಲಿ ಈತನಿಗೆ ಸಹಕಾರ ನೀಡುತ್ತಿದ್ದನು ಎಂಬುದೂ ತನಿಖೆಯಿಂದ ತಿಳಿದುಬಂದಿದೆ.ಬಂಧಿತ ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತಿದ್ದು, ಪ್ರಕರಣದ ತನಿಖೆ ಮುಂದುವರೆದಿದೆ.

- Advertisement -

Related news

error: Content is protected !!