Monday, July 27, 2026
spot_imgspot_img
spot_imgspot_img

ಯುವಕನ ಮೇಲೆ ಕರಡಿ ದಾಳಿ: ಆಸ್ಪತ್ರೆಗೆ ದಾಖಲು

- Advertisement -
- Advertisement -

ಕನಕಗಿರಿ: ಸಮೀಪದ ಲಕ್ಷ್ಮೀದೇವಿ ಕೆರೆ ಪರಿಸರದ ಹೊಲದಲ್ಲಿ ಕೃಷಿ ಚಟುವಟಿಕೆಯಲ್ಲಿ ತೊಡಗಿದ್ದ ಯುವಕನ ಮೇಲೆ ಕರಡಿ ದಾಳಿ ನಡೆಸಿ ಗಾಯಗೊಳಿಸಿದ ಘಟನೆ ಬುಧವಾರ ಬೆಳಿಗ್ಗೆ ನಡೆದಿದೆ.ಪಟ್ಟಣದ ಗೊಲ್ಲರವಾಡಿಯ ರಮೇಶ್ ಗಾಯಗೊಂಡ ವ್ಯಕ್ತಿಯಾಗಿದ್ದು, ಅವರನ್ನು ಕನಕಗಿರಿಯ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ಇಲಾಖೆ ಮೂಲಗಳು ತಿಳಿಸಿವೆ.

ಘಟನೆ ಕುರಿತು ಮಾಹಿತಿ ಪಡೆದ ಅರಣ್ಯ ಅಧಿಕಾರಿ ಬಸವರಾಜ ಪೂಜಾರ ಹಾಗೂ ಉಪ ವಲಯ ಅರಣ್ಯಾಧಿಕಾರಿ ಎಸ್‌.ಎಂ.ಡಿ. ಸುಲೇಮಾನ ಸೇರಿದಂತೆ ಅರಣ್ಯ ಇಲಾಖೆಯ ಸಿಬ್ಬಂದಿ ಆಸ್ಪತ್ರೆಗೆ ಭೇಟಿ ನೀಡಿ ಗಾಯಾಳುವಿಗೆ ಸಾಂತ್ವನ ಹೇಳಿದರು.ಗಾಯಳುವಿಗೆ ಸರ್ಕಾರದಿಂದ ಪರಿಹಾರ ಒದಗಿಸಲಾಗುವುದು ಎಂದು ಅಧಿಕಾರಿಗಳು ಭರವಸೆ ನೀಡಿದ್ದಾರೆ.

- Advertisement -

Related news

error: Content is protected !!