- Advertisement -
- Advertisement -




ಹೊಸದಿಲ್ಲಿ: ವಿವಾಹಿತ ವ್ಯಕ್ತಿಯೊಬ್ಬರು ಲಿವ್ ಇನ್ ಸಂಬಂಧದಲ್ಲಿರುವುದನ್ನು ಅಪರಾಧ ಎಂದು ಪರಿಗಣಿಸಲಾಗುವುದಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಬುಧವಾರ ಅಭಿಪ್ರಾಯಪಟ್ಟಿದೆ.
ನ್ಯಾಯಮೂರ್ತಿ ಜೆಜೆ ಮುನೀರ್ ಮತ್ತು ನ್ಯಾಯಮೂರ್ತಿ ತರುಣ್ ಸಕ್ಸೇನಾ ಅವರ ನೇತೃತ್ವದ ವಿಭಾಗೀಯ ಪೀಠವು, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ಲಿವ್ ಇನ್ ದಂಪತಿಗೆ ರಕ್ಷಣೆ ಕೋರಿ ಸಲ್ಲಿಸಿದ ಅರ್ಜಿಯನ್ನು ವಿಚಾರಣೆ ನಡೆಸಿದೆ.
ವಿವಾಹಿತ ವ್ಯಕ್ತಿಯೊಬ್ಬರು, ವಯಸ್ಕ ಮಹಿಳೆ ಜೊತೆ ಪರಸ್ಪರ ಒಪ್ಪಿಗೆಯಿಂದ ಲಿವ್-ಇನ್ ಸಂಬಂಧದಲ್ಲಿ ಇರುವುದನ್ನು ಅಪರಾಧವಾಗಿ ಪರಿಗಣಿಸಲು ಸಾಧ್ಯವಿಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಪೀಠ ಸ್ಪಷ್ಟಪಡಿಸಿದೆ. ನಾಗರಿಕರ ಹಕ್ಕುಗಳನ್ನು ರಕ್ಷಿಸುವ ತನ್ನ ಕ್ರಮಗಳನ್ನು ಸಾಮಾಜಿಕ ಅಭಿಪ್ರಾಯ ಅಥವಾ ನೈತಿಕತೆಯಿಂದ ನಿರ್ದೇಶಿಸಲಾಗುವುದಿಲ್ಲ ಎಂದು ನ್ಯಾಯಾಲಯ ಹೇಳಿದೆ.
ಕಳೆದ ಡಿಸೆಂಬರ್‌ನಲ್ಲಿ ಅಲಹಾಬಾದ್ 12 ಲಿವ್-ಇನ್ ಜೋಡಿಗಳಿಗೆ ರಕ್ಷಣೆ ನೀಡುವಂತೆ ಪೊಲೀಸರಿಗೆ ನಿರ್ದೇಶನ ನೀಡಿತ್ತು.
- Advertisement -







