- Advertisement -
- Advertisement -

ಯಾದಗಿರಿ: ಮರಳು ಸಾಗಿಸುತ್ತಿದ್ದ ಟ್ರಾಕ್ಟರ್‌ಗೆ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಮೃತಪಟ್ಟ ಘಟನೆ ಗುರುಮಠಕಲ್ ತಾಲೂಕಿನ ಕಡೇಚೂರು ಸಮೀಪದ ರಾಜ್ಯ ಹೆದ್ದಾರಿಯಲ್ಲಿ ರವಿವಾರ ನಡೆದಿದೆ.ಮೃತರನ್ನು ಗೌಡಗೇರಾ ಗ್ರಾಮದ ಶಿವರಾಜ್ (60) ಹಾಗೂ ಬಸವಲಿಂಗ (28) ಎಂದು ಗುರುತಿಸಲಾಗಿದೆ.





ಅಪಘಾತದ ಬಳಿಕ ಟ್ರಾಕ್ಟರ್ ಚಾಲಕ ವಾಹನ ಬಿಟ್ಟು ಪರಾರಿಯಾಗಿದ್ದಾನೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡಿದ್ದ ಇಬ್ಬರನ್ನು ರಾಯಚೂರಿನ ರಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ ಎಂದು ತಿಳಿದು ಬಂದಿದೆ.
ಸ್ಥಳಕ್ಕೆ ಸೈದಾಪುರ ಪೊಲೀಸರು ಭೇಟಿ ಪರಿಶೀಲನೆ ನಡೆಸಿದ್ದಾರೆ.
- Advertisement -








