Wednesday, July 22, 2026
spot_imgspot_img
spot_imgspot_img

ಬೆಳ್ತಂಗಡಿ: ಕ್ಯಾಂಟಿನ್‌ ಒಳಗೆ ನಡೆಯುತ್ತಿತ್ತು ಅಕ್ರಮ ದಂಧೆ: ಬೆಳ್ತಂಗಡಿ ಪೊಲೀಸರ ದಾಳಿ -ಇಬ್ಬರ ವಿರುದ್ಧ ಪ್ರಕರಣ

- Advertisement -
- Advertisement -

ಬೆಳ್ತಂಗಡಿ: ತಾಲೂಕಿನ ಕಸಬಾ ಗ್ರಾಮದ ಕೆಇಬಿ ರಸ್ತೆಯಲ್ಲಿರುವ “ಪವನ್” ಹೆಸರಿನ ಕ್ಯಾಂಟಿನ್‌ನಲ್ಲಿ ಅಕ್ರಮ ವೇಶ್ಯಾವಾಟಿಕೆ ನಡೆಯುತ್ತಿರುವ ಕುರಿತು ದೊರೆತ ಖಚಿತ ಮಾಹಿತಿಯ ಮೇರೆಗೆ ಬೆಳ್ತಂಗಡಿ ಪೊಲೀಸರು ದಾಳಿ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಕ್ಯಾಂಟಿನ್‌ ನಡೆಸುತ್ತಿದ್ದ ಸುಂದರ್‌ ಶೆಟ್ಟಿ ಹಾಗೂ ಅವರ ಪರಿಚಯದ ಉಸ್ಮಾನ್‌ ಸೇರಿಕೊಂಡು ಅಕ್ರಮವಾಗಿ ಲಾಭ ಗಳಿಸುವ ಉದ್ದೇಶದಿಂದ ಕ್ಯಾಂಟಿನ್‌ನ ಒಳಭಾಗದ ಕೋಣೆಯಲ್ಲಿ ಮಹಿಳೆಯರನ್ನು ಕರೆಸಿಕೊಂಡು ವೇಶ್ಯಾವಾಟಿಕೆ ನಡೆಸುತ್ತಿದ್ದರೆಂದು ಆರೋಪಿಸಲಾಗಿದೆ.

ಈ ಕುರಿತು ಸಿಕಂದರ್‌ ಪಾಷಾ, ಪೊಲೀಸ್‌ ಉಪನಿರೀಕ್ಷಕರು (ತನಿಖೆ), ಬೆಳ್ತಂಗಡಿ ಪೊಲೀಸ್ ಠಾಣೆಗೆ ಮಾಹಿತಿ ಲಭಿಸಿದ್ದು, ಗುಪ್ತವಾಗಿ ಪರಿಶೀಲಿಸಿದ ವೇಳೆ ಸ್ಥಳದಲ್ಲಿ ವೇಶ್ಯಾವಾಟಿಕೆ ನಡೆಯುತ್ತಿರುವುದು ದೃಢಪಟ್ಟಿದೆ ಎನ್ನಲಾಗಿದೆ.ದಿನಾಂಕ 10.05.2026ರಂದು ಸಂಜೆ ಬೆಳ್ತಂಗಡಿ ವೃತ್ತ ನಿರೀಕ್ಷಕರಾದ ರವಿ ಬಿ.ಎಸ್ ನೇತೃತ್ವದಲ್ಲಿ ಪೊಲೀಸ್ ಸಿಬ್ಬಂದಿಗಳು ದಾಳಿ ನಡೆಸಿದ್ದಾರೆ.ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಅ.ಕ್ರ.48/2026ರಂತೆ ಐಟಿಪಿ ಆಕ್ಟ್‌ನ ಕಲಂ 3, 4, 5 ಹಾಗೂ ಬಿ.ಎನ್.ಎಸ್‌ನ ಕಲಂ 143(2)ರಡಿ ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಲಾಗಿದೆ.

- Advertisement -

Related news

error: Content is protected !!