Thursday, July 23, 2026
spot_imgspot_img
spot_imgspot_img

ಸವಣೂರು ಅಪಘಾತದಲ್ಲಿ ಗಾಯಗೊಂಡಿದ್ದ ಪಾಣಾಜೆಯ ಯುವಕ ಮೃತ್ಯು

- Advertisement -
- Advertisement -

ಸವಣೂರು: ಸಮೀಪದ ಚಾಪಳ್ಳ ತಿರುವಿನಲ್ಲಿ ಮಂಗಳವಾರ ಸಂಭವಿಸಿದ್ದ ಭೀಕರ ರಸ್ತೆ ಅಪಘಾತದಲ್ಲಿ ಗಾಯಗೊಂಡಿದ್ದ ಮತ್ತೊಬ್ಬ ಯುವಕ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಈ ಅಪಘಾತದಲ್ಲಿ ಬಂಟ್ವಾಳ ತಾಲ್ಲೂಕಿನ ಮಿತ್ತೂರು ಗ್ರಾಮದ ಯಜೇಶ್ (21) ಸ್ಥಳದಲ್ಲೇ ಮೃತಪಟ್ಟಿದ್ದರೆ, ಗಂಭೀರವಾಗಿ ಗಾಯಗೊಂಡಿದ್ದ ಪುತ್ತೂರು ತಾಲ್ಲೂಕಿನ ಪಾಣಾಜೆ ಗ್ರಾಮದ ಜಗನ್ (20) ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಜಗನ್ ಕೂಡ ಬಳಿಕ ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ.

ಜಗನ್ ಅವರು ಪುತ್ತೂರಿನ ಅಕ್ಷಯ ಕಾಲೇಜಿನಲ್ಲಿ ಹೋಟೆಲ್ ಮ್ಯಾನೇಜ್ಮೆಂಟ್ ವಿದ್ಯಾರ್ಥಿಯಾಗಿದ್ದು, ಇತ್ತೀಚೆಗೆ ಇಂಟರ್ನ್‌ಷಿಪ್ ನಿಮಿತ್ತ ಆಸ್ಟ್ರೇಲಿಯಾಗೆ ತೆರಳಿ ವಾಪಸ್ಸಾಗಿ ಊರಿಗೆ ಬಂದಿದ್ದರು ಎನ್ನಲಾಗಿದೆ.ಅಪಘಾತದ ಸಂಕ್ಷಿಪ್ತ ವಿವರಯುವಕರು ಆಲಂಕಾರಿಗೆ ತೆರಳಿ ಮನೆಗೆ ಹಿಂತಿರುಗುವ ವೇಳೆ ಚಾಪಳ್ಳ ತಿರುವಿನಲ್ಲಿ ಎದುರಿನಿಂದ ಬರುತ್ತಿದ್ದ ನೀರಿನ ಟ್ಯಾಂಕರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಈ ದುರ್ಘಟನೆ ಸಂಭವಿಸಿತ್ತು. ಡಿಕ್ಕಿಯ ತೀವ್ರತೆಗೆ ಯಜೇಶ್ ಸ್ಥಳದಲ್ಲೇ ಮೃತಪಟ್ಟಿದ್ದು, ಜಗನ್ ಗಂಭೀರ ಗಾಯಗೊಂಡಿದ್ದರು.

- Advertisement -

Related news

error: Content is protected !!