- Advertisement -
- Advertisement -


ಹೊಸದಿಲ್ಲಿ ಮೇ 8: ಖಾಸಗಿ ಶಾಲೆಯ ಸಿಬ್ಬಂದಿಯೋರ್ವ ಮೂರರ ಹರೆಯದ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಘಟನೆ ಪಶ್ಚಿಮ ದಿಲ್ಲಿಯ ಜನಕಪುರಿಯಲ್ಲಿ ನಡೆದಿದೆ ಎಂದು ಅಧಿಕಾರಿಯೋರ್ವರು ಶುಕ್ರವಾರ ತಿಳಿಸಿದ್ದಾರೆ.ಶಾಲಾ ಸಿಬ್ಬಂದಿಯೋರ್ವ ಶಾಲೆಯ ಅವಧಿಯಲ್ಲಿ ತನ್ನ ಮಗಳ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆಂದು ಆರೋಪಿಸಿ ಮಗುವಿನ ತಾಯಿ ಮೇ 1ರಂದು ಜನಕಪುರಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ ನಂತರ ಈ ಘಟನೆ ಬೆಳಕಿಗೆ ಬಂದಿದೆ.ದೂರಿನ ಆಧಾರದಲ್ಲಿ ಬಿಎನ್‌ಎಸ್ ಮತ್ತು ಪೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.




ಆತನನ್ನು ನ್ಯಾಯಾಲಯದಲ್ಲಿ ಹಾಜರುಪಡಿಸಲಾಗಿದ್ದು, ನ್ಯಾಯಾಂಗ ಬಂಧನ ವಿಧಿಸಲಾಗಿತ್ತು.ಪ್ರಾಸಿಕ್ಯೂಷನ್ ಬಲವಾಗಿ ವಿರೋಧಿಸಿದ್ದರೂ ದ್ವಾರಕಾದ ನ್ಯಾಯಾಲಯವು ಮೇ 7ರಂದು ಆರೋಪಿಗೆ ಜಾಮೀನು ಮಂಜೂರು ಮಾಡಿದೆ. ನ್ಯಾಯಾಲಯದ ಆದೇಶ ಕೈಸೇರಿದ ಬಳಿಕ ಮುಂದಿನ ಕ್ರಮವನ್ನು ತೆಗೆದುಕೊಳ್ಳಲಾಗುವುದು ಎಂದು ಪೊಲೀಸರು ಹೇಳಿಕೆಯಲ್ಲಿ ತಿಳಿಸಿದ್ದಾರೆ
- Advertisement -








