Monday, July 20, 2026
spot_imgspot_img
spot_imgspot_img

ಕನ್ನಡಿಕಟ್ಟೆಯಲ್ಲಿ ಭೀಕರ ರಸ್ತೆ ಅಪಘಾತ; ಪ್ರಗತಿಪರ ಕೃಷಿಕ ಅನಿಲ್ ಬಳಂಜ ಪತ್ನಿ ಮೃತ್ಯು – ಅನಿಲ್‌ ಬಳಂಜ, ಪುತ್ರನಿಗೆ ಗಾಯ

- Advertisement -
- Advertisement -

ಬೆಳ್ತಂಗಡಿ: ಭೀಕರ ರಸ್ತೆ ಅಪಘಾತದಲ್ಲಿ ಸ್ಥಳದಲ್ಲೇ ಮಹಿಳೆಯೊಬ್ಬರು ಮೃತಪಟ್ಟ ಘಟನೆ ಬೆಳ್ತಂಗಡಿ ತಾಲೂಕಿನ ಪಡಂಗಡಿ ಗ್ರಾಮದ ಕನ್ನಡಿಕಟ್ಟೆ ಬಳಿ ಮೇ.17 ರಂದು ರಾತ್ರಿ ನಡೆದಿದೆ.ಬೆಳ್ತಂಗಡಿ ತಾಲೂಕಿನ ಬಳಂಜ ಗ್ರಾಮದ ಬಳಂಜ ಫಾರ್ಮ್ ನ ಮಾಲಕ ಪ್ರಗತಿಪರ ಕೃಷಿಕ ಅನಿಲ್ ಭಟ್ (45) ಅವರ ಪತ್ನಿ ಶೈಲಜಾ (35) ಅಪಘಾತದಲ್ಲಿ ಗಂಭೀರವಾಗಿ ಗಾಯಗೊಂಡು ಮೃತಪಟ್ಟಿದ್ದು, ಅನಿಲ್ ಭಟ್ ಅವರು ಗಾಯಗೊಂಡಿದ್ದಾರೆ.

ಅವರನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ. ಅವರ ಪುತ್ರ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾರೆ.ಅನಿಲ್ ಭಟ್ ಮತ್ತು ಪತ್ನಿ ಶೈಲಜಾ ಅವರು ತಮ್ಮ ಫಾರ್ಮ್ ನ ಕೆಲಸ ಮುಗಿಸಿ ಅವರ ಸೈಟ್ ಗೆ ಬೈಕ್ ನಲ್ಲಿ ತೆರಳುತ್ತಿದ್ದಾಗ ಕನ್ನಡಿಕಟ್ಟೆ ಬಳಿ ಬೈಕ್‌ ಮತ್ತು ಕಾರು ನಡುವೆ ಢಿಕ್ಕಿ ಸಂಭವಿಸಿದೆ.

ಸ್ಥಳಕ್ಕೆ ಬೆಳ್ತಂಗಡಿ ಸಂಚಾರಿ ಪೋಲಿಸರು ಆಗಮಿಸಿ ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

- Advertisement -

Related news

error: Content is protected !!