- Advertisement -





- Advertisement -
ಬೆಂಗಳೂರು: ಬಿಜೆಪಿ ಹಿರಿಯ ಮುಖಂಡ, ಮಾಜಿ ಸಚಿವ, ಶಾಸಕ ಆರ್. ಅಶೋಕ್ ವಿಪಕ್ಷ ನಾಯಕನನ್ನಾಗಿ ಬಿಜೆಪಿ ಶಾಸಕಾಂಗ ಪಕ್ಷದ ಸಭೆಯಲ್ಲಿ ನಿರ್ಧಾರ ಮಾಡಿ ಘೋಷಣೆ ಮಾಡಲಾಗಿದೆ. ಬೆಂಗಳೂರಿನ ಪದ್ಮನಾಭನಗರ ಕ್ಷೇತ್ರದ ಶಾಸಕರಾಗಿರುವ ಅವರನ್ನು ಆಯ್ಕೆ ಮಾಡಲಾಗಿದೆ.
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ನಡೆದ ಬಿಜೆಪಿ ಶಾಸಕಾಂಗ ಸಭೆಯ ನಂತರ ಆರ್.ಅಶೋಕ್ ಹೆಸರು ಘೋಷಣೆ ಮಾಡಲಾಗಿದೆ. ಅಶೋಕ್ ಹೆಸರಿಗೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೂಚನೆ ಕೊಟ್ಟರೆ, ಶಾಸಕ ಸುನಿಲ್ ಕುಮಾರ್ ಅನುಮೋದನೆ ನೀಡಿದರು.
- Advertisement -