- Advertisement -
- Advertisement -

ಕಾಪು : ಪ್ರವಾಹ, ನೆರೆ ಮತ್ತು ಪ್ರಕೃತಿ ವಿಕೋಪದಂತಹ ಸಮಸ್ಯೆಗಳನ್ನು ಎದುರಿಸಲು ರಾಜ್ಯ ಸರಕಾರ ಸನ್ನದ್ಧವಾಗಿದೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದರು.

ಉಡುಪಿ ಜಿಲ್ಲೆಯ ಕಾಪು ಮತ್ತು ತೆಕ್ಕಟ್ಟೆಯಲ್ಲಿ ಸುನಾಮಿ ಸೆಂಟರ್ ಗಳು ಪ್ರವಾಹ ಸಂತ್ರಸ್ತರಿಗಾಗಿ ಸಿದ್ಧವಾಗಿದೆ. ಕಾರ್ಕಳದಲ್ಲಿ ಹೊಸದಾಗಿ ವಿವಿಧೋದ್ದೇಶ ಆಶ್ರಯ ತಾಣ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಅನುದಾನವನ್ನು ಸರಕಾರ ಮಂಜೂರುಗೊಳಿಸಿದ್ದು, ಅದಕ್ಕೆ ಬೇಕಾದ ಸಿದ್ಧತೆಗಳನ್ನು ನಡೆಸುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದರು.

ದ.ಕ. ಜಿಲ್ಲಾ ಉಸ್ತವಾರಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಜಿಲ್ಲಾಧಿಕಾರಿ ಜಿ. ಜಗದೀಶ್, ಪೊಲೀಸ್ ವರಿಷ್ಟಾಧಿಕಾರಿ ವಿಷ್ಣುವರ್ಧನ್, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಬಿಜೆಪಿ ಜಿಲ್ಲಾಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಇನ್ನಿತರರು ಉಪಸ್ಥಿತರಿದ್ದರು.

- Advertisement -