Saturday, June 20, 2026
spot_imgspot_img
spot_imgspot_img

ಸ್ಯಾಂಡಲ್‌ವುಡ್‌ ಡ್ರಗ್ಸ್‌ ಪ್ರಕರಣದಲ್ಲಿ ನಟಿ ರಾಗಿಣಿ ಬಂಧನ.!

- Advertisement -
- Advertisement -

ಬೆಂಗಳೂರು: ಮಾದಕ ಜಾಲಕ್ಕೆ ಸ್ಯಾಂಡಲ್​ವುಡ್​ ನಂಟಿದೆ ಎಂಬ ಆರೋಪ ಕುರಿತು ತನಿಖೆ ನಡೆಸುತ್ತಿರುವ ಸಿಸಿಬಿ ಪೊಲೀಸರು ತುಪ್ಪದ ಬೆಡಗಿ ರಾಗಿಣಿ ದ್ವಿವೇದಿ ಅವರನ್ನು ಶುಕ್ರವಾರ ಸಂಜೆ ಬಂಧಿಸಿದ್ದಾರೆ.

ಇಂದು ಬೆಳಗ್ಗೆ ವಿಚಾರಣೆಗೆ ಆಗಮಿಸಿದ ರಾಗಿಣಿ ಅವರನ್ನು ಸಿಸಿಬಿ ಅಧಿಕಾರಿಗಳು ಸುದೀರ್ಘ ವಿಚಾರಣೆ ನಡೆಸಿದರು. ಅವರನ್ನು ಬಂಧಿಸಿರುವ ಬಗ್ಗೆ ಸಂಜೆಯಷ್ಟೇ ಸಿಸಿಬಿ ಜಂಟಿ‌ ಪೊಲೀಸ್ ಆಯುಕ್ತ ಸಂದೀಪ್‌ ಪಾಟೀಲ್ ಸ್ಪಷ್ಟನೆ ನೀಡಿದ್ದಾರೆ.

ಈ ಮೂಲಕ ಡ್ರಗ್ಸ್ ದಂಧೆಯಲ್ಲಿ ನಟಿಯ ಲಿಂಕ್ ಇರುವ ಆರೋಪ ಮತ್ತಷ್ಟು ಗಟ್ಟಿಯಾಗಿದೆ. ರಾಗಿಣಿಯ
ಮನೆಯ ಮೂಲೆ ಮೂಲೆಯನ್ನು ಅಧಿಕಾರಿಗಳು ಹುಡುಕಾಡಿದ್ದರು. ಮನೆಯೊಳಗಿದ್ದ ಚಿಕ್ಕ ಪುಟ್ಟ ವಸ್ತುಗಳನ್ನು ಕೂಡ ಜಾಲಾಡಿದ್ದರು. ರಾಗಿಣಿ ವಿರುದ್ಧ ಸಿಸಿಬಿ ಪೊಲೀಸರು ಸುಮೋಟೋ ಪ್ರಕರಣ ದಾಖಲಿಸಿದ್ದಾರೆ. ಡ್ರಗ್ಸ್ ಜಾಲಕ್ಕೆ ಸಂಬಂಧಿಸಿದಂತೆ ಸಿಸಿಬಿ ಪೊಲೀಸರು ಈಗಾಗಲೇ ರಾಹುಲ್ ಹಾಗೂ ರವಿಶಂಕರ್ ಅವರನ್ನು ಬಂಧಿಸಿದ್ದಾರೆ.

- Advertisement -

Related news

error: Content is protected !!