Thursday, April 25, 2024
spot_imgspot_img
spot_imgspot_img

ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್19ಕ್ಕೆ ಮುಂದೂಡಿಕೆ. ಇನ್ನೂ ಮೂರು ದಿನಗಳ ಕಾಲ ರಾಗಿಣಿ ಜೈಲುವಾಸ.!

- Advertisement -G L Acharya panikkar
- Advertisement -

ಬೆಂಗಳೂರು: ಸ್ಯಾಂಡಲ್​ವುಡ್ ಡ್ರಗ್ಸ್ ಜಾಲ ಪ್ರಕರಣದಲ್ಲಿ ಜೈಲು ಸೇರಿರುವ  ನಟಿ ರಾಗಿಣಿ ಜಾಮೀನು ಅರ್ಜಿ ವಿಚಾರಣೆ ಸೆಪ್ಟೆಂಬರ್19ಕ್ಕೆ ಮುಂದೂಡಿದೆ.

 ಸೋಮವಾರ ಸೆಪ್ಟೆಂಬರ್​ 14ರಂದು ರಾಗಿಣಿಗೆ 1ನೇ ಎಸಿಎಂಎಂ ನ್ಯಾಯಾಲಯವು 14 ದಿನಗಳ ನ್ಯಾಯಾಂಗ ಬಂಧನಕ್ಕೆ ಆದೇಶಿಸಿತ್ತು. ಈ ಸಂಬಂಧ, ರಾಗಿಣಿ ಪರ ವಕೀಲರು ಮಧ್ಯಂತರ ಜಾಮೀನು ಅರ್ಜಿ ಹಾಕಿದ್ದರು. ಪ್ರಕರಣದಲ್ಲಿ ಜಾಮೀನು ಕೋರಿ ನಟಿ ರಾಗಿಣಿ ದ್ವಿವೇದಿ ಸಲ್ಲಿಸಿದ್ದ ಅರ್ಜಿಯನ್ನು ನಗರದ ಸಿಟಿ ಸಿವಿಲ್ ಕೋರ್ಟ್ ಆವರಣದಲ್ಲಿರುವ ಎನ್​​ಡಿಪಿಎಸ್ ವಿಶೇಷ ನ್ಯಾಯಾಲಯ ವಿಚಾರಣೆ ನಡೆಸಿತು.

ಪ್ರಾಸಿಕ್ಯೂಷನ್​ ಪರ ವಕೀಲರು ಜಾಮೀನು ಅರ್ಜಿಗೆ ಆಕ್ಷೇಪಣೆ ಸಲ್ಲಿಸಲು ಕಾಲಾವಕಾಶ ನೀಡಬೇಕು ಎಂದು ಕೋರಿದರು. ಸಿಸಿಬಿ ಮನವಿ ಮಾಡಿದ್ದ ಹಿನ್ನೆಲೆಯಲ್ಲಿ ನ್ಯಾಯಾಲಯವು ಮೂರು ದಿನಗಳ ಕಾಲ ಮುಂದೂಡಿದ್ದು ವಿಚಾರಣೆಯನ್ನು ಸೆಪ್ಟೆಂಬರ್ 19ಕ್ಕೆ ಮುಂದೂಡಿತು. ಇದೇ ವೇಳೆ ಇತರೆ ಆರೋಪಿಗಳ ಜಾಮೀನು ಅರ್ಜಿಗಳನ್ನೂ ಇದೇ ಕಾರಣಕ್ಕಾಗಿ ಮುಂದೂಡಿತು.

- Advertisement -

Related news

error: Content is protected !!