Friday, June 5, 2026
spot_imgspot_img
spot_imgspot_img

ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋದ ರಾಗಿಣಿ

- Advertisement -
- Advertisement -

ಬೆಂಗಳೂರು: ಸ್ಯಾಂಡಲ್ ವುಡ್ ಗೆ ಡ್ರಗ್ಸ್ ಪ್ರಕರಣದಲ್ಲಿ ಬಂಧಿತರಾಗಿ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಟಿ ರಾಗಿಣಿ ದ್ವಿವೇದಿ ಜಾಮೀನಿಗಾಗಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.


ಡ್ರಗ್ಸ್ ಪ್ರಕರಣದಲ್ಲಿ ಬಂಧನಕ್ಕೀಡಾಗಿರುವ ನಟಿಯರಾದ ರಾಗಿಣಿ ದ್ವಿವೇದಿ ಹಾಗೂ ಸಂಜನಾ ಗಲ್ರಾಣಿ ಕಳೆದ ಮೂರು ತಿಂಗಳಿಂದ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದು, ಜಾಮೀನಿಗಾಗಿ ಇನ್ನಿಲ್ಲದ ಕಸರತ್ತು ನಡೆಸಿದ್ದಾರೆ. ನಟಿ ಸಂಜನಾ ಮತ್ತೆ ಹೈಕೋರ್ಟ್ ಮೊರೆ ಹೋದರೆ, ಇದೀಗ ನಟಿ ರಾಗಿಣಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.
ಹೈಕೋರ್ಟ್’ನಲ್ಲಿ ಜಾಮೀನು ಸಿಗದ ಕಾರಣ ನಟಿ ರಾಗಿಣಿ ದ್ವಿವೇದಿ ಪರ ವಕೀಲರು ಈಗ ಸುಪ್ರೀಂ ಕೋರ್ಟ್’ನಲ್ಲಿ ಅರ್ಜಿ ಸಲ್ಲಿಸಿದ್ದು, ಡಿ.4ರಂದು ಅರ್ಜಿ ವಿಚಾರಣೆಗೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ.

- Advertisement -

Related news

error: Content is protected !!