Friday, April 26, 2024
spot_imgspot_img
spot_imgspot_img

ಡ್ರಗ್ಸ್‌ ಕೇಸ್‌: ರಾಗಿಣಿ, ಸಂಜನಾ ಸೇರಿ 25 ಮಂದಿ ವಿರುದ್ಧ ಚಾರ್ಜ್‌ಶೀಟ್

- Advertisement -G L Acharya panikkar
- Advertisement -

ಬೆಂಗಳೂರು: ಅಂತರರಾಷ್ಟ್ರೀಯ ಡ್ರಗ್ಸ್ ಜಾಲ ಪ್ರಕರಣ ದ ಬಗ್ಗೆ ನಟಿಯರಾದ ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ ಸೇರಿದಂತೆ 25 ಮಂದಿ ವಿರುದ್ಧ ಸಿಸಿಬಿ ಪೊಲೀಸರು ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದಾರೆ.

ಪಾರ್ಟಿಗಳನ್ನು ಆಯೋಜಿಸಿ ಡ್ರಗ್ಸ್ ಮಾರಾಟ ಹಾಗೂ ಸೇವನೆ ಮಾಡುತ್ತಿದ್ದ ಪ್ರಕರಣವನ್ನು ಭೇದಿಸಿದ್ದ ಸಿಸಿಬಿ ಪೊಲೀಸರು, ಆರೋಪಿಗಳನ್ನು ಬಂಧಿಸಿ ಜೈಲಿಗೆ ಕಳುಹಿಸಿದ್ದರು. ಕೆಲವರು ಈಗಾಗಲೇ ಜಾಮೀನು ಮೇಲೆ ಹೊರಗೆ ಬಂದಿದ್ದಾರೆ. ಇದೀಗ ಪ್ರಕರಣದ ತನಿಖೆ ಪೂರ್ಣಗೊಳಿಸಿರುವ ಪೊಲೀಸರು 2,900 ಪುಟಗಳ ದೋಷಾರೋಪ ಪಟ್ಟಿಯನ್ನು ಸಿದ್ಧಪಡಿಸಿ ನ್ಯಾಯಾಲಯಕ್ಕೆ ನೀಡಿದ್ದಾರೆ.

ಪ್ರಕರಣದಲ್ಲಿ ಮೂವರು ತಲೆಮರೆಸಿಕೊಂಡಿದ್ದಾರೆ. ರಾಗಿಣಿ ದ್ವಿವೇದಿ, ಸಂಜನಾ ಗರ್ಲಾನಿ, ವಿರೇನ್‌ ಖನ್ನಾ ಸೇರಿದಂತೆ 25 ಆರೋಪಿಗಳನ್ನು ಬಂಧಿಸಲಾಗಿದ್ದು, ಅವರ ವಿರುದ್ಧ ದೋಷಾರೋಪ ಪಟ್ಟಿ ಸಲ್ಲಿಸಲಾಗಿದೆ. 180 ಸಾಕ್ಷಿಗಳ ಹೇಳಿಕೆ ಉಲ್ಲೇಖಿಸಲಾಗಿದೆ ಎಂದೂ ಸಿಸಿಬಿ ಮೂಲಗಳು ಹೇಳಿವೆ.

- Advertisement -

Related news

error: Content is protected !!