Sunday, June 29, 2025
spot_imgspot_img
spot_imgspot_img

ಲೋಕಸಭೆಯ ವಿಪಕ್ಷ ನಾಯಕನಾಗಿ ರಾಹುಲ್‌ ಗಾಂಧಿ ಆಯ್ಕೆ

- Advertisement -
- Advertisement -

ಲೋಕಸಭೆ ವಿರೋಧ ಪಕ್ಷದ ನಾಯಕನಾಗಿ ಕಾಂಗ್ರೆಸ್ ನಾಯಕ ಹಾಗೂ ರಾಯ್​ಬರೇಲಿ ಸಂಸದ ರಾಹುಲ್ ಗಾಂಧಿ ಅವರನ್ನು ಆಯ್ಕೆ ಮಾಡಲಾಗಿದೆ.

ಲೋಕಸಭಾ ವಿಪಕ್ಷ ಸ್ಥಾನಕ್ಕೆ ರಾಹುಲ್‌ ಗಾಂಧಿ ಅವರೇ ಆಗಬೇಕೆಂದು ಕಾಂಗ್ರೆಸ್‌ ನಾಯಕರು ಹಿಂದೆ ಆಗ್ರಹ ಮಾಡಿದ್ದರು. ಆದರೆ ರಾಹುಲ್‌ ಗಾಂಧಿ ಕಡೆಯಿಂದ ಯಾವುದೇ ಅಂತಿಮ ತೀರ್ಮಾನ ಬಂದಿರಲಿಲ್ಲ. ಈಗ ರಾಹುಲ್‌ ಗಾಂಧಿ ವಿಪಕ್ಷ ನಾಯಕನ ಸ್ಥಾನವನ್ನು ಒಪ್ಪಿಕೊಂಡಿದ್ದಾರೆ.

ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ನಿನ್ನೆ ಇಂಡಿಯಾ ಬ್ಲಾಕ್‌ನ ಸಭೆ ನಡೆಯಿತು. ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ಬಗ್ಗೆ ಚರ್ಚೆ ನಡೆಸಲಾಯಿತು. ಇಂಡಿಯಾ ಬ್ಲಾಕ್ ಸಭೆಯ ನಂತರ ಮಾಹಿತಿ ನೀಡಿದ ಕಾಂಗ್ರೆಸ್ ಹಿರಿಯ ನಾಯಕ ಹಾಗೂ ಸಂಸದ ಕೆ.ಸಿ. ವೇಣುಗೋಪಾಲ್, ಈ ಸಭೆಯಲ್ಲಿ ರಾಹುಲ್ ಗಾಂಧಿ ಅವರನ್ನು ಸದನದ ವಿರೋಧ ಪಕ್ಷದ ನಾಯಕರನ್ನಾಗಿ ಮಾಡುವ ಬಗ್ಗೆ ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ.

ಮೋದಿಮೊದಲ ಅವಧಿಯಲ್ಲಿ ಮಲ್ಲಿಕಾರ್ಜುನ ಖರ್ಗೆ , ಎರಡನೇ ಅವಧಿಯಲ್ಲಿ ಅಧಿರಂಜನ್‌ ಚೌಧರಿ ಲೋಕಸಭೆಯ ವಿಪಕ್ಷ ನಾಯಕನಾಗಿ ಆಯ್ಕೆ ಆಗಿದ್ದರು

- Advertisement -

Related news

error: Content is protected !!