Wednesday, May 15, 2024
spot_imgspot_img
spot_imgspot_img

ಪುತ್ತೂರು: ರೈ ಎಸ್ಟೇಟ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ – ಫಲಾನುಭವಿಗಳ ಸಮಾವೇಶ, ವಸ್ತ್ರ ವಿತರಣಾ ಕಾರ್ಯಕ್ರಮ ‘ಸೇವಾ ಸೌರಭ’ ಮತ್ತು ಗೂಡು ದೀಪ ಸ್ಪರ್ಧೆ

- Advertisement -G L Acharya panikkar
- Advertisement -

ಪುತ್ತೂರು: ಶಾಸಕ ಅಶೋಕ್ ಕುಮಾರ್ ರೈ ಅವರ ನೇತೃತ್ವದ ರೈ ಎಸ್ಟೇಟ್ ಎಜುಕೇಶನಲ್ ಅಂಡ್ ಚಾರಿಟೇಬಲ್ ಟ್ರಸ್ಟ್ – ಫಲಾನುಭವಿಗಳ ಸಮಾವೇಶ, ವಸ್ತ್ರ ವಿತರಣಾ ಕಾರ್ಯಕ್ರಮ ‘ಸೇವಾ ಸೌರಭ’ ಮತ್ತು ಗೂಡು ದೀಪ ಸ್ಪರ್ಧೆ ನ.13ರಂದು ಇಲ್ಲಿನ ಕೊಂಬೆಟ್ಟು ತಾಲೂಕು ಕ್ರೀಡಾಂಗಣದಲ್ಲಿ ನಡೆದಿದೆ.

ಬೆಳಗ್ಗೆಯಿಂದ ಸಂಜೆ ತನಕ ನಿರಂತರವಾಗಿ ವಸ್ತ್ರ ವಿತರಣೆ ನಡೆದಿದ್ದು ಸುಮಾರು 65 ಸಾವಿರಕ್ಕೂ ಅಧಿಕ ಮಂದಿಗೆ ವಸ್ತ್ರ ವಿತರಣೆ, ಸಹಭೋಜನ ವ್ಯವಸ್ಥೆಯೊಂದಿಗೆ ಕಾರ್ಯಕ್ರಮ ನಡೆಯಿತು.

ಕಾರ್ಯಕ್ರಮದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನಮ್‍ ನ ಶ್ರೀ ಗುರುದೇವಾನಂದ ಸ್ವಾಮೀಜಿಯವರು ವಸ್ತ್ರ ವಿತರಣೆ, ಸಹಭೋಜನ ಕಾರ್ಯಕ್ರಮ ‘ಸೇವಾ ಸೌರಭ’ವನ್ನು ಕಲ್ಪವೃಕ್ಷದ ಹಿಂಗಾರ ಅರಳಿಸುವ ಮೂಲಕ ಉದ್ಘಾಟಿಸಿ ಆಶೀರ್ವಚನ ನೀಡಿ ಸಂಪತ್ತು ಮೌಲ್ಯವರ್ಧನೆ ಆಗುವುದು ದಾನ ಮಾಡಿದಾಗ ಮಾತ್ರ. ಮಾನವೀಯತೆ ಇದ್ದಲ್ಲಿ ಬದುಕು ಬಂಗಾರವಾಗಲು ಸಾಧ್ಯ. ಇವೆರಡು ಇಂದಿನ ಕಾರ್ಯಕ್ರಮದಲ್ಲಿ ಮೇಳೈಸಿದೆ ಎಂದು ಹೇಳಿದರು. ರೋಷ ದ್ವೇಷದಿಂದ ಜನರನ್ನು ಗೆಲ್ಲಲು ಸಾಧ್ಯವಿಲ್ಲ. ಪ್ರೀತಿಯ ಬಲದಿಂದ ಲೋಕದ ಜನರನ್ನು ಗೆಲ್ಲಬಹುದು. ಇದನ್ನು ಅಶೋಕ್ ಕುಮಾರ್ ರೈ ತೋರಿಸಿಕೊಟ್ಟಿದ್ದಾರೆ ಎಂದರು. ಈ ಕಾರ್ಯಕ್ರಮದಲ್ಲಿ ಹೊಟ್ಟೆಗೆ ಅನ್ನ, ಉಡಲು ವಸ್ತ್ರದಾನ ನಡೆಯುತ್ತಿದೆ. ನಮ್ಮ ನಡೆನುಡಿಯೇ ಧರ್ಮದ ಮರ್ಮ, ರಾಜಕೀಯದಲ್ಲಿ ಧರ್ಮ ಬೇಕು. ಆದರೆ ಧರ್ಮದಲ್ಲಿ ರಾಜಕೀಯ ಬೇಡ. ಮಾನವೀಯತೆ ಇದ್ದಲ್ಲಿ ಬದುಕು ಒಳ್ಳೆಯದಾಗುತ್ತದೆ. ಹಿಂದಿನ ಬಾಗಿಲು ತೆರೆಯುವ ಕೆಲಸ ಮಾಡುವುದು ಬೇಡ. ಭ್ರಷ್ಟಾಚಾರ ರಹಿತ ಕೆಲಸ ಮಾಡಿ ಎಂದು ಶ್ರೀ ಗುರುದೇವಾನಂದ ಸ್ವಾಮೀಜಿಯವರು ಶಾಸಕ ಅಶೋಕ್‌ ಕುಮಾರ್ ರೈರವರಿಗೆ ಹೇಳಿ ಕಾರ್ಯಕ್ರಮಕ್ಕೆ ಶುಭಹಾರೈಸಿದರು.

ವಿಧಾನಸಭಾ ಸಭಾಪತಿ ಯು.ಟಿ.ಖಾದರ್, ಮಾಜಿ ಸಚಿವ ಬಿ.ರಮಾನಾಥ ರೈ ಮಾತನಾಡಿ ಶುಭಹಾರೈಸಿರು.

ರೈ ಏಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷ, ಶಾಸಕ ಅಶೋಕ್ ಕುಮಾರ್ ರೈ ಅಧ್ಯಕ್ಷತೆ ವಹಿಸಿ ಪ್ರಾಸ್ತಾವಿಕವಾಗಿ ಮಾತನಾಡಿ, ನಮ್ಮ ತಂದೆ-ತಾಯಿ ಮಾಡಿಕೊಂಡ ಬಂದಿರುವ ವಸ್ತ್ರ ವಿತರಣೆಯನ್ನು ಸಂಪ್ರದಾಯವಾಗಿ ಮಾಡಿಕೊಂಡಿ ಬರುತ್ತಿದ್ದೇನೆ. ಮುಂದಿನ ದಿನಗಳಲ್ಲಿ 94ಸಿ, 94ಸಿಸಿ ಕಾನೂನು ರೀತಿಯಲ್ಲಿ ಭ್ರಷ್ಟಾಚಾರಮುಕ್ತವಾಗಿ ಪ್ರತಿಯೊಬ್ಬ ಫಲಾನುಭವಿಯ ಮನೆ ಮನೆಗೆ ತಲುಪಿಸುವ ಕೆಲಸ ಮಾಡುತ್ತೇವೆ. ಈಗಾಗಲೇ 600 ಮಂದಿ ಮಹಿಳೆಯರು ಮನೆಯಿಲ್ಲದೆ ನಿರ್ಗತಿಕರಾಗಿ ಬದುಕುತ್ತಿದ್ದಾರೆ. ಅವರಿಗೆ ಮೂರು ಸೆಂಟ್ಸ್ ಜಾಗ ನೀಡುವ ಕೆಲಸ ಮುಂದಿನ ದಿನಗಳಲ್ಲಿ ಆಗಲಿದೆ ಎಂದರು.

ವೇದಿಕೆಯಲ್ಲಿ ಮಾಜಿ ಶಾಸಕಿ ಶಕುಂತಳಾ ಟಿ. ಶೆಟ್ಟಿ, ಟ್ರಸ್ಟ್ ಮುಖ್ಯಸ್ಥೆ ಸುಮಾ ಅಶೋಕ್ ರೈ, ರೈ ಎಸ್ಟೇಟ್ ಎಜ್ಯುಕೇಶನಲ್ & ಚಾರಿಟೇಬಲ್ ಟ್ರಸ್ಟ್ ಕಾರ್ಯಾಧ್ಯಕ್ಷ ಸುದೇಶ್ ಶೆಟ್ಟಿ , ಕೆಪಿಸಿಸಿ ವಕ್ತಾರ ಮಹಮ್ಮದ್ ಬಡಗನ್ನೂರು, ಪುತ್ತೂರು ಮಾಯಿದೇ ದೇವುಸ್‍ಚರ್ಚ್ ಧರ್ಮಗುರು ವಿ.ರೆ.ಫಾ.ಲಾರೆನ್ಸ್ ಮಸ್ಕರೇನಸ್, ವಿಧಾನಪರಿಷತ್ ಸದಸ್ಯ ಹರೀಶ್ ಕುಮಾರ್, ಧಾರ್ಮಿಕ ಮುಖಂಡ ಜ.ಹುಸೈನ್ ದಾರಿಮಿ ರೆಂಜಿಲಾಡಿ,ಪುತ್ತೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿಶ್ವನಾಥ ರೈ ಎಂ.ಬಿ., ವಿಟ್ಲ-ಉಪ್ಪಿನಂಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಡಾ.ರಾಜಾರಾಂ ಕೆ.ಬಿ., ಕೊಂಬೆಟ್ಟು ಶ್ರೀ ರಾಮಕೃಷ್ಣ ಪ್ರೌಢಶಾಲಾ ಸಂಚಾಲಕ ಹೇಮನಾಥ ಶೆಟ್ಟಿ ಕಾವು, ಪುತ್ತೂರು ಕೋಟಿ-ಚೆನ್ನಯ ಜೋಡುಕರೆ ಕಂಬಳ ಸಮಿತಿ ಅಧ್ಯಕ್ಷ ಚಂದ್ರಹಾಸ ಶೆಟ್ಟಿ, ನಗರ ಕಾಂಗ್ರೆಸ್ ಅಧ್ಯಕ್ಷ ಮಹಮ್ಮದಾಲಿ, ಟ್ರಸ್ಟ್ ನ ನಿಹಾಲ್ ರೈ, ಸುಬ್ರಹ್ಮಣ್ಯ ರೈ ದಂಪತಿ, ಡಾ.ರಘು ಬೆಳ್ಳಿಪ್ಪಾಡಿ, ಬೇಬಿ ಕುಂದರ್, ಪ್ರಗತಿಪರ ಕೃಷಿಕ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ತಿಲು, ಜಿಪಂ ಮಾಜಿ ಸದಸ್ಯ ಎಂ.ಎಸ್‍.ಮಹಮ್ಮದ್, ಟ್ರಸ್ಟ್ ಸಾಮಾಜಿಕ ಜಾಲತಾಣ ಮುಖ್ಯಸ್ಥ ಕೃಷ್ಣ ಪ್ರಸಾದ್ ಬೊಲ್ಲಾವು ಉಪಸ್ಥಿತರಿದ್ದರು.

- Advertisement -

Related news

error: Content is protected !!