Tuesday, May 7, 2024
spot_imgspot_img
spot_imgspot_img

ವಿಟ್ಲ: ರೈ ಎಸ್ಟೇಟ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ದಶಮಾನೋತ್ಸವ, ಟ್ರಸ್ಟ್ ಫಲಾನುಭವಿಗಳ ಸಮಾವೇಶ ಹಿನ್ನೆಲೆ; ಪೂರ್ವಭಾವಿ ಸಭೆ

- Advertisement -G L Acharya panikkar
- Advertisement -

ವಿಟ್ಲ: ಪುತ್ತೂರಿನ ಕಿಲ್ಲೆ ಮೈದಾನದಲ್ಲಿ ಅ.26ರಂದು ನಡೆಯಲಿರುವ ಕೋಡಿಂಬಾಡಿ ರೈ ಎಸ್ಟೇಟ್ ಮಾಲಕರಾದ ಉದ್ಯಮಿ ಅಶೋಕ್ ಕುಮಾರ್ ರೈ ನೇತೃತ್ವದ ರೈ ಎಸ್ಟೇಟ್ ಎಜುಕೇಶನಲ್ ಮತ್ತು ಚಾರಿಟೇಬಲ್ ಟ್ರಸ್ಟ್ ನ ದಶಮಾನೋತ್ಸವ, ಟ್ರಸ್ಟ್ ಫಲಾನುಭವಿಗಳ ಸಮಾವೇಶ ಮತ್ತು ದೀಪಾವಳಿ ಹಬ್ಬ ಪ್ರಯುಕ್ತದ ವಸ್ತ್ರ ವಿತರಣೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹಮ್ಮಿಕೊಳ್ಳಲಾಗಿರುವ ಗ್ರಾಮ ಗ್ರಾಮಗಳಿಗೆ ಭೇಟಿ ನೀಡಿ ಕಾರ್ಯಕ್ರಮಕ್ಕೆ ಜನರನ್ನು ಆಹ್ವಾನಿಸುವ ಸಲುವಾಗಿ ಈ ದಿನ ದಿನಾಂಕ 16.10.2022 ರಂದು ವಿಟ್ಲದ ಮಾಮೇಶ್ವರ ಮತ್ತು ಶಿವಾಜಿನಗರದಲ್ಲಿ ಸಭೆ ನಡೆಸಲಾಯಿತು.

ಈ ಸಭೆಯಲ್ಲಿ ಟ್ರಸ್ಟ್ ನ ಸೌಲಭ್ಯಗಳ ಬಗ್ಗೆ ಮಾಹಿತಿ ಮತ್ತು ಕಾರ್ಯಕ್ರಮದ ಬಗ್ಗೆ ಮಾಹಿತಿಯನ್ನು ಟ್ರಸ್ಟ್‌ನ ಪ್ರವರ್ತಕರಾದ ಆಶೋಕ್ ಕುಮಾರ್ ರೈ ಕೋಡಿಂಬಾಡಿಯವರು ನೀಡಿ ಎಲ್ಲರನ್ನು ಕಾರ್ಯಕ್ರಮಕ್ಕೆ ಆಹ್ವಾನಿಸಿ, ಆಮಂತ್ರಣ ಪತ್ರ ನೀಡಿದರು.

ಈ ಸಂದರ್ಭದಲ್ಲಿ ಸೀತಾರಾಮ ಶೆಟ್ಟಿ ಹೆಗ್ಡೆಹಿತ್ತಿಲು, ಜಯಪ್ರಕಾಶ್ ಬದಿನಾರು, ಲೊಕೇಶ್ ಅಡ್ಡಾಳಿ, ವಿಶ್ವನಾಥ ಗೌಡ ನಾಯ್ತೊಟ್ಟು, ಕೃಷ್ಣಯ್ಯ ಕೆ ವಿಟ್ಲ ಅರಮನೆ, ರಾಮಚಂದ್ರ ನಾಯ್ಕ, ಸುರೇಶ್ ವಿಟ್ಲ, ರಾಮ್ ದಾಸ್ ಶೆಟ್ಟಿ ವಿಟ್ಲ, ಪ್ರವೀಣ್ ಕುಮಾರ್ ಉಪಸ್ಥಿತರಿದ್ದರು.

- Advertisement -

Related news

error: Content is protected !!