Tuesday, June 16, 2026
spot_imgspot_img
spot_imgspot_img

ರಾಯಚೂರು: ಅಪ್ರಾಪ್ತ ಅಕ್ಕ-ತಂಗಿ ಮೇಲೆ ಅತ್ಯಾಚಾರ – ಪೋಕ್ಸೊ ಪ್ರಕರಣ ದಾಖಲು, ಆರೋಪಿಯ ಬಂಧನ

- Advertisement -
- Advertisement -

ರಾಯಚೂರು: ಜಿಲ್ಲೆಯ ಸಿಂಧನೂರು ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಇಬ್ಬರು ಅಪ್ರಾಪ್ತ ಅಕ್ಕ ತಂಗಿಯರ ಮೇಲೆ ಕಿರಾತಕನೋರ್ವ ಲೈಂಗಿಕ ದೌರ್ಜನ್ಯ ಎಸಗಿರುವ ಘಟನೆ ನಡೆದಿದೆ.

ಎರಡು ಮತ್ತು 3ನೇ ತರಗತಿ ಓದುತ್ತಿದ್ದ 8 ಹಾಗೂ 9 ವರ್ಷದ ಬಾಲಕಿಯರ ಮೇಲೆ ದೌರ್ಜನ್ಯ ಎಸಗಲಾಗಿದೆ. ಬಾಲಕಿಯರ ಕುಟುಂಬಕ್ಕೆ ಪರಿಚಯಸ್ಥ ವ್ಯಕ್ತಿಯಿಂದಲೇ ಅತ್ಯಾಚಾರ ನಡೆದಿದೆ. ಫ್ಯಾಕ್ಟರಿಯೊಂದರಲ್ಲಿ ಕೆಲಸ ಮಾಡುತ್ತಿರುವ ಆರೋಪಿ 30 ವರ್ಷದ ಬಾಬಾನನ್ನ ಪೊಲೀಸರು ಬಂಧಿಸಿದ್ದಾರೆ.

ಬಾಲಕಿಯರ ಪೋಷಕರು ಕೂಲಿ ಕೆಲಸಕ್ಕೆ ಹೋದಾಗ ಅವರ ಶೆಡ್‌ಗೆ ಬಂದು ಕೃತ್ಯ ಎಸಗಿದ್ದಾನೆ. ಕೂಲಿ ಕೆಲಸ ಮಾಡಿಕೊಂಡು ಶೆಡ್‌ನಲ್ಲಿ ಜೀವನ ನಡೆಸುತ್ತಿರುವ ಬಡ ಕುಟುಂಬಕ್ಕೆ ಘಟನೆಯಿಂದ ಆಘಾತವಾಗಿದೆ.

ಸಿಂಧನೂರು ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೊ, ಅತ್ಯಾಚಾರ, ಜಾತಿನಿಂದನೆ ಪ್ರಕರಣ ದಾಖಲಾಗಿದ್ದು ಆರೋಪಿಯನ್ನ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ.

- Advertisement -

Related news

error: Content is protected !!