- Advertisement -
- Advertisement -




ರಾಯಚೂರು: ರಸ್ತೆಯಲ್ಲಿ ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಮರಕ್ಕೆ ಡಿಕ್ಕಿ ಹೊಡೆದ ಪರಿಣಾಮ ಸವಾರಿಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಸಿಂಧನೂರು ತಾಲೂಕಿನ ಮೂಡಲಗಿರಿ ಕ್ಯಾಂಪ್ ಬಳಿ ನಡೆದಿದೆ.
ಮೃತರನ್ನು ಗಾಂಧಿನಗರದ ಸಂತೋಷ (22), ಹನುಮಂತರಾಯ (22) ಎನ್ನಲಾಗಿದೆ.ಬೈಕ್ ನಲ್ಲಿ ಗಾಂಧಿನಗರದಿಂದ ಸಿಂಧನೂರಿಗೆ ತೆರಳುವಾಗ ಈ ಅವಘಡ ಸಂಭವಿಸಿದೆ .ಘಟನೆಗೆ ಸಂಬಂಧಿಸಿದಂತೆ ಸಿಂಧನೂರು ಸಂಚಾರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








