Sunday, July 19, 2026
spot_imgspot_img
spot_imgspot_img

ರಾಯಚೂರು: ಅಕಾಲಿಕ ಮಳೆಯಿಂದ ಲಕ್ಷಾಂತರ ಮೌಲ್ಯದ ಸಜ್ಜೆ, ಜೋಳ ಹಾನಿ

- Advertisement -
- Advertisement -

ರಾಯಚೂರು: ಜಿಲ್ಲೆಯಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಹಲವೆಡೆ ಸಜ್ಜೆ, ಜೋಳದ ಬೆಳೆ ಹಾಳಾಗಿದ್ದು, ರೈತರು ಲಕ್ಷಾಂತರ ರೂಪಾಯಿ ನಷ್ಟ ಅನುಭವಿಸಿದ್ದಾರೆ.

ಜಿಲ್ಲೆಯ ದೇವದುರ್ಗ ತಾಲೂಕಿನ ಹೆಚ್.ಸಿದ್ದಾಪುರ ಹಾಗೂ ಸುತ್ತಮುತ್ತಲ ಗ್ರಾಮಗಳಲ್ಲಿ ಸುರಿದ ಅಕಾಲಿಕ ಮಳೆಯಿಂದಾಗಿ ಬೆಳೆಹಾನಿಯಾಗಿದೆ. ಹೆಚ್.ಸಿದ್ದಾಪುರ ಗ್ರಾಮದ ರೈತ ಕೃಷ್ಣಾ ಅವರಿಗೆ ಸೇರಿದ 7 ಎಕರೆ ಸಜ್ಜೆ ಬೆಳೆ ಸಂಪೂರ್ಣ ನೆಲಕ್ಕಚ್ಚಿದ್ದು, ಸಾವಿರಾರು ರೂಪಾಯಿ ಖರ್ಚು ಮಾಡಿ ಬೆಳೆದಿದ್ದ ಬೆಳೆ ನಷ್ಟದಿಂದ ರೈತ ಕಂಗಾಲಾಗಿದ್ದಾರೆ. ನೆಲಕ್ಕಚ್ಚಿದ ಬೆಳೆಯನ್ನ ಎತ್ತಿನಿಲ್ಲಿಸಿ ಉಳಿಸಿಕೊಳ್ಳಲು ರೈತ ಹರಸಾಹಸ ಪಡುತ್ತಿದ್ದಾರೆ.

ಗಾಳಿ ಹಾಗೂ ಮಳೆಗೆ ಜಿಲ್ಲೆಯ ಹಲವೆಡೆ ಭತ್ತ, ಜೋಳದ ಬೆಳೆಗಳಿಗೆ ಹಾನಿಯಾಗಿದ್ದು, ಕೂಡಲೇ ಬೆಳೆ ಪರಿಶೀಲನೆ ನಡೆಸಿ, ಪರಿಹಾರ ನೀಡುವಂತೆ ರೈತರು ಒತ್ತಾಯಿಸಿದ್ದಾರೆ ಎನ್ನಲಾಗಿದೆ.

- Advertisement -

Related news

error: Content is protected !!