- Advertisement -
- Advertisement -






ಕಳೆದ ಒಂದು ವಾರದಿಂದ ರಾಜ್ಯದಲ್ಲಿ ಮುಂಗಾರು ಚುರುಕಾಗಿದ್ದು, ಕೆಲವು ಕಡೆಗಳಲ್ಲಿ ಧಾರಾಕಾರ ಮಳೆ ಸುರಿದಿದೆ. ಇನ್ನೂ ಮೂರು ದಿನಗಳ ಕಾಲ ರಾಜ್ಯದಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಚಿಕ್ಕಮಗಳೂರು, ಶಿವಮೊಗ್ಗ, ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ ಮತ್ತು ಕೊಡಗು ಜಿಲ್ಲೆಗಳಿಗೆ ಭಾರೀ ಮಳೆ ಮುನ್ಸೂಚನೆ ನೀಡಿರುವ ಇಲಾಖೆ ರೆಡ್ ಅಲರ್ಟ್ ಘೋಷಿಸಿದೆ.
ಹಾವೇರಿ, ಬೆಳಗಾವಿ, ಧಾರವಾಡ, ಹಾಸನ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಮುನ್ನೆಚ್ಚರಿಕೆ ವಹಿಸಲು ಸೂಚಿಸಲಾಗಿದೆ
- Advertisement -