Friday, June 27, 2025
spot_imgspot_img
spot_imgspot_img

ಮುಂದಿನ ಮೂರು ದಿನ ರಾಜ್ಯದಲ್ಲಿ ಭಾರೀ ಮಳೆ ಸಾಧ್ಯತೆ

- Advertisement -
- Advertisement -

ರಾಜ್ಯದಲ್ಲಿ ಜೂನ್ 25 ರವರೆಗೆ ಜೋರಾದ ಗಾಳಿಯೊಂದಿಗೆ ಭಾರಿ ಮಳೆಯಾಗುವ ಮುನ್ಸೂಚನೆ ಹಿನ್ನೆಲೆಯಲ್ಲಿ ಹವಾಮಾನ ಇಲಾಖೆಯು ಯೆಲ್ಲೋ ಅಲರ್ಟ್‌ ಘೋಷಿಸಿದೆ. ಬೆಂಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮುಂದಿನ 48 ಗಂಟೆಗಳ ಕಾಲ ಸಾಮಾನ್ಯವಾಗಿ ಮೋಡ ಕವಿದ ವಾತಾವರಣ ಇರಲಿದ್ದು, ನಿರಂತರ ಗಾಳಿಯೊಂದಿಗೆ ಕಿ.ಮೀ.ಗೆ ಹಗುರ ಮಳೆಯಾಗುವ ಸಾಧ್ಯತೆ ಇದೆ. ಗರಿಷ್ಠ ಮತ್ತು ಕನಿಷ್ಠ ತಾಪಮಾನವು ಸುಮಾರು 30 ಮತ್ತು 21 ಡಿಗ್ರಿ ಸೆಲ್ಸಿಯಸ್ ಇರುವ ಸಾಧ್ಯತೆ ಇದೆ.

ಇನ್ನು ಜೂನ್‌ 23ರಂದು ಕರಾವಳಿ ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿ, ಗದಗ, ಬಾಗಲಕೋಟೆ, ಕೊಪ್ಪಳ, ಬೀದರ್, ಕಲಬುರ್ಗಿ, ವಿಜಯಪುರ, ರಾಯಚೂರು, ಯಾದಗಿರಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ಮೈಸೂರು, ಮಂಡ್ಯ, ಹಾಸನ, ರಾಮನಗರ, ಬಳ್ಳಾರಿ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ಕೋಲಾರ, ದಾವಣಗೆರೆ, ತುಮಕೂರು ಮತ್ತು ವಿಜಯನಗರ ಜಿಲ್ಲೆಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದೆ.

- Advertisement -

Related news

error: Content is protected !!