Sunday, October 6, 2024
spot_imgspot_img
spot_imgspot_img

ಕರಾವಳಿಯಲ್ಲಿ ಭಾರೀ ವರ್ಷಧಾರೆ:ಕುಮಾರಧಾರದಲ್ಲಿ ನೀರಿನ ಮಟ್ಟ ಹೆಚ್ಚಳ.

- Advertisement -
- Advertisement -

ವರದಿ: ನ್ಯೂಸ್ ಡೆಸ್ಕ್, ವಿ ಟಿವಿ

ಮಂಗಳೂರು: ಕರಾವಳಿಯಲ್ಲಿ ವರುಣನ ಆರ್ಭಟ ಜೋರಾಗಿದೆ. ದ.ಕ ಜಿಲ್ಲೆಯ ಸುಳ್ಯ,ಪುತ್ತೂರು,ಬಂಟ್ವಾಳ ತಾಲೂಕಿನಲ್ಲಿ ಭಾರೀ ಮಳೆ ಸುರಿಯುತ್ತಿದೆ. ಹೀಗಾಗಿ ನೇತ್ರಾವತಿ ಹಾಗೂ ಕುಮಾರಧಾರದಲ್ಲಿ ನೀರಿನ ಮಟ್ಟ ಹೆಚ್ಚಾಗಿದೆ.
ಕಳೆದ ಮೂರು ದಿನಗಳಿಂದ ನಿರಂತರವಾಗಿ ಭಾರೀ ಮಳೆಯಾಗುತ್ತಿದ್ದು, ಕುಕ್ಕೆ ಸುಬ್ರಹ್ಮಣ್ಯದಲ್ಲಿ ಕುಮಾರಧಾರ ಸ್ನಾನಘಟ್ಟ ಮುಳುಗಡೆಯಾಗಿದೆ. ಸುಬ್ರಹ್ಮಣ್ಯ-ಮಂಜೇಶ್ವರ ರಾಜ್ಯ ಹೆದ್ದಾರಿ ಇಂದು ಮುಂಜಾನೆ ತನಕ ಬಂದ್ ಆಗಿತ್ತು. ಸುಬ್ರಹ್ಮಣ್ಯ ಭಾಗದಲ್ಲಿ ಇಂದೂ ಭಾರೀ ಮಳೆಯಾಗುತ್ತಿದೆ.

ಮತ್ತೊಂದುಕಡೆ ಭಾರೀ ಗಾಳಿ-ಮಳೆಯಿಂದಾಗಿ ಹಲವಾರು ರಸ್ತೆಗಳ ಮೇಲೆ ಮರ ಬಿದ್ದು ವಾಹನ ಸಂಚಾರಕ್ಕೆ ಅಡ್ಡಿ ಉಂಟಾಗಿತ್ತು. ಬೆಳ್ತಂಗಡಿ ಭಾಗದ ಮೃತ್ಯುಂಜಯ ನದಿಯಲ್ಲೂ ನೀರಿನ ಮಟ್ಟ ಹೆಚ್ಚಳವಾಗಿದೆ.

- Advertisement -

Related news

error: Content is protected !!