Saturday, April 20, 2024
spot_imgspot_img
spot_imgspot_img

ರಾಜ್ಯದಲ್ಲಿ ಇನ್ನೂ 2 ದಿನ ಗುಡುಗು ಸಹಿತ ಭಾರಿ ಮಳೆ- 7 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಣೆ!

- Advertisement -G L Acharya panikkar
- Advertisement -

ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಮೇಲ್ಮೈ ಕುಳಿರ್ಗಾಳಿ ಮತ್ತಷ್ಟು ತೀವ್ರಗೊಂಡಿರುವ ಪರಿಣಾಮ, ರಾಜ್ಯದಲ್ಲಿ ಇನ್ನೂ 2 ದಿನ ಧಾರಾಕಾರ ಮಳೆ ಸುರಿಯುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಜನವರಿ 8 ಮತ್ತು 9ರಂದು ಕರಾವಳಿ ಮತ್ತು ದಕ್ಷಿಣ ಒಳನಾಡಿನ ಭಾಗಗಳಲ್ಲಿ ಗುಡುಗು ಸಹಿತ ಭಾರಿ ಮಳೆಯಾಗಲಿದ್ದು, ಈಗಾಗಲೇ ರಾಜ್ಯದ ಒಟ್ಟು 7 ಜಿಲ್ಲೆಗಳಲ್ಲಿ ಯಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳು ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಮತ್ತು ಹಾಸನ ಜಿಲ್ಲೆಗಳಲ್ಲಿ ಭಾರಿ ಮಳೆ ಸುರಿಯುವ ಮುನ್ಸೂಚನೆ ಇದೆ.

64.5 ಮಿ.ಮೀ ನಿಂದ 115.5 ಮಿ.ಮೀ ವರೆಗೂ ಮಳೆ ಸುರಿಯುವ ಸಂಭವವಿದೆ ಎಂದು ಹವಾಮಾನ ಇಲಾಖೆ ತಿಳಿಸಿದ್ದು, ಕರಾವಾಳಿ ಜಿಲ್ಲೆ ಹಾಗೂ ದಕ್ಷಿಣ ಒಳನಾಡಿನ ಹಲವು ಜಿಲ್ಲೆಗಳಲ್ಲಿ ಮತ್ತು ಉತ್ತರ ಒಳನಾಡಿನ ಹಲವೆಡೆ ಮುಂದಿನ 48 ಗಂಟೆಗಳಲ್ಲಿ ತುಂತುರು ಮಳೆಯಾಗುವ ಸಾಧ್ಯತೆ ಇದೆ ಎನ್ನಲಾಗಿದೆ.

- Advertisement -

Related news

error: Content is protected !!