Saturday, January 25, 2025
spot_imgspot_img
spot_imgspot_img

ರಾಜಭವನಕ್ಕೆ ದಿಢೀರ್ ಭೇಟಿ ನೀಡಿದ ಮುಖ್ಯಮಂತ್ರಿ ಯಡಿಯೂರಪ್ಪ.

- Advertisement -
- Advertisement -

ಬೆಂಗಳೂರು: ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರು ಇಂದು ರಾಜ್ಯಪಾಲ ವಜುಭಾಯಿ ವಾಲಾ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದರು. ಬಿಎಸ್ ವೈ ಜೊತೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಜೊತೆಗಿದ್ದರು.ಸಿಎಂ ಬಿಎಸ್ ವೈ ಅವರ ಈ ನಡೆ ರಾಜ್ಯ ರಾಜಕೀಯದಲ್ಲಿ ಹೊಸ ಕುತೂಹಲ ಮೂಡಿಸಿದೆ.

ಸಚಿವ ಸಂಪುಟ ವಿಸ್ತರಣೆ ಬಗ್ಗೆ ಚರ್ಚಿಸಿಲು ಸಿಎಂ ಬಿಎಸ್ ವೈ ರಾಜ್ಯಪಾಲರನ್ನು ಭೇಟಿಯಾಗಿದ್ದಾರೆ. ಸಂಪುಟ ವಿಸ್ತರಣೆ ಅಥವಾ ಸಚಿವ ಸಂಪುಟ ಪುನಾರಚನೆ ಬಗ್ಗೆ ಹೈಕಮಾಂಡ್ ನಿಂದ ಮಾಹಿತಿ ಬಗ್ಗೆ ಚೆರ್ಚೆ ಎನ್ನುವ ಮಾತುಗಳು ಕೇಳಿಬರುತ್ತಿದೆ. ಈ ನಡುವೆ ಡಿಸಿಎಂ ಲಕ್ಷ್ಮಣ್ ‌ಸವದಿ ದೆಹಲಿ ಭೇಟಿ ಬಳಿಕ, ರಾಜ್ಯಪಾಲರನ್ನು ಮುಖ್ಯಮಂತ್ರಿ ಭೇಟಿ ಮಾಡುತ್ತಿರುವುದು ಹಲವು ಚೆರ್ಚೆಗ ಕಾರಣವಾಗಿದೆ.

- Advertisement -

Related news

error: Content is protected !!