Thursday, May 2, 2024
spot_imgspot_img
spot_imgspot_img

ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣ; ಆರು ಹಂತಕರನ್ನು ಜೈಲಿನಿಂದ ಬಿಡುಗಡೆ

- Advertisement -G L Acharya panikkar
- Advertisement -
vtv vitla

ನವದೆಹಲಿ: ದಿವಂಗತ ಪ್ರಧಾನಿ ರಾಜೀವ್ ಗಾಂಧಿ ಅವರ ಹತ್ಯೆ ಪ್ರಕರಣದ ಆರು ಹಂತಕರನ್ನು ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ. ಸುಪ್ರೀಂ ಕೋರ್ಟ್ ಬಿಡುಗಡೆಗೊಳಿಸುವಂತೆ ಶುಕ್ರವಾರ ಆದೇಶ ನೀಡಿತ್ತು. ಈ ಪ್ರಕರಣದಲ್ಲಿ ನಳಿನಿ ಶ್ರೀ ಹರನ್ ಸೇರಿದಂತೆ ಐವರನ್ನು ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ.

ಈ ಹಿಂದೆ ತಮಿಳುನಾಡು ಸರ್ಕಾರ ಕೂಡಾ ರಾಜೀವ್ ಗಾಂಧಿ ಹಂತಕರ ಬಿಡುಗಡೆಗೆ ರಾಜ್ಯಪಾಲರಿಗೆ ಶಿಫಾರಸು ಮಾಡಿತ್ತು. ಇದನ್ನು ಸುಪ್ರೀಂ ಕೋರ್ಟ್ ಪರಿಗಣಿಸಿದ್ದು, ಅವರ ಬಿಡುಗಡೆಗೆ ಆದೇಶಿಸಿದೆ. ಮೇ ತಿಂಗಳಲ್ಲಿ ಮತ್ತೋರ್ವ ಆರೋಪಿ ಪೇರಾರಿವಾಳನ್ ಅವರನ್ನು ಸುಪ್ರೀಂ ಕೋರ್ಟ್ ಬಿಡುಗಡೆ ಮಾಡಿತ್ತು.

ನಳಿನಿ ಶ್ರೀ ಹರನ್ ಅಲ್ಲದೇ, ಶ್ರೀಹರನ್, ಸಂತನ್, ಮುರುಗನ್, ರಾಬರ್ಟ್ ಪಾಯಸ್ ಮತ್ತು ರವಿಚಂದ್ರನ್ ಅವರನ್ನು ಜೈಲಿನಿಂದ ಬಿಡುಗಡೆಗೊಳಿಸಲಾಗಿದೆ. ಮೇ 21, 1991ರಲ್ಲಿ ತಮಿಳುನಾಡಿನ ಪೆರಂಬೂರಿನಲ್ಲಿ ಎಲ್ ಟಿಟಿಐ ಗುಂಪಿನ ಮಹಿಳಾ ಆತ್ಯಾಹುತಿ ಬಾಂಬರ್ ಗಳಿಂದ ರಾಜೀವ್ ಗಾಂಧಿ ಅವರ ಹತ್ಯೆಯಾಗಿತ್ತು.

ನಳಿನಿ ಶ್ರೀಹರನ್ ಜೈಲಿನಿಂದ ಬಿಡುಗಡೆಯಿಂದ ಅವರ ಸ್ವಗ್ರಾಮ ವೆಲ್ಲೂರಿನ ನಿವಾಸದ ಮುಂದೆ ಕುಟುಂಬಸ್ಥರು ಪಟಾಕಿ ಸಿಡಿಸಿ, ಸಿಹಿ ಹಂಚಿ ಸಂತೋಷ ವ್ಯಕ್ತಪಡಿಸಿದ್ದಾರೆ.

- Advertisement -

Related news

error: Content is protected !!