Saturday, April 20, 2024
spot_imgspot_img
spot_imgspot_img

ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಮರುನಾಮಕರಣ ಮಾಡಿದ ಮೋದಿ ಸರ್ಕಾರ

- Advertisement -G L Acharya panikkar
- Advertisement -

ನವದೆಹಲಿ: ಕ್ರೀಡಾ ಸಾಧಕರಿಗೆ ನೀಡುವ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಗೆ ಮರುನಾಮಕರಣ ಮಾಡಿದ ಪ್ರಧಾನಿ ಮೋದಿಯವರು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಘೋಷಿಸಿದ್ದಾರೆ.

ಇನ್ಮುಂದೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯನ್ನು ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ ಪ್ರಶಸ್ತಿ ಎಂದು ಕೊಡಲ್ಪಡುತ್ತದೆ. ಖೇಲ್ ರತ್ನ ಪ್ರಶಸ್ತಿಗೆ ಭಾರತದ ಹಾಕಿ ದಿಗ್ಗಜ ಧ್ಯಾನ್ ಚಂದ್ ಹೆಸರಿಡುವಂತೆ ಅನೇಕರು ಮನವಿ ಮಾಡಿದ್ದರು. ಆ ಕೋರಿಕೆ ಮೇರೆಗೆ ಪ್ರಶಸ್ತಿಗೆ ಮರುನಾಮಕರಣ ಮಾಡಲಾಗಿದೆ ಎಂದು ತಿಳಿಸಿದ್ದಾರೆ ಎಂದು ಪ್ರಧಾನಿ ಮೋದಿ ಟ್ವೀಟ್ ಮಾಡಿದ್ದಾರೆ

ಕ್ರೀಡಾ ಕ್ಷೇತ್ರದಲ್ಲಿ ಸಾಧನೆ ಮಾಡಿದವರಿಗೆ ಅತ್ಯುನ್ನತ ಗೌರವಾಗಿರುವ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿ ನೀಡಲಾಗುತ್ತಿತ್ತು. ಹಾಕಿ ದಿಗ್ಗಜ ಸರ್ದಾರ್ ಸಿಂಗ್, ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾ, ಕ್ರೀಕೆಟ್ ಆಟಗಾರರಾದ ಸಚಿನ್ ತೆಂಡೂಲ್ಕರ್, ಎಂ.ಎಸ್.ಧೋನಿ, ವಿರಾಟ್ ಕೊಹ್ಲಿ ಸೇರಿದಂತೆ ಹಲವು ಕ್ರೀಡಾಪಟುಗಳು ಈ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಇದನ್ನೂ ಓದಿ: ದ.ಕ ಜಿಲ್ಲೆ ಸೇರಿ ಗಡಿ ಜಿಲ್ಲೆಗಳಲ್ಲಿ ವೀಕೆಂಡ್ ಕರ್ಫ್ಯೂ ಜಾರಿ, ನೈಟ್ ಕರ್ಫ್ಯೂ ಸಮಯ ಬದಲು

ಇನ್ಮುಂದೆ ರಾಜೀವ್ ಗಾಂಧಿ ಖೇಲ್ ರತ್ನ ಪ್ರಶಸ್ತಿಯ ಹೆಸರು ಮೇಜರ್ ಧ್ಯಾನ್ ಚಂದ್ ಪ್ರಶಸ್ತಿ ಎಂದು ಮರು ನಾಮಕರಣ ಮಾಡಲಾಗಿದೆ.

driving
- Advertisement -

Related news

error: Content is protected !!