- Advertisement -
- Advertisement -
ಬೆಂಗಳೂರು: ನಾವು ಯಾವತ್ತೂ ರಾಮಮಂದಿರ ನಿರ್ಮಾಣಕ್ಕೆ ವಿರೋಧ ಮಾಡಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಟ್ವೀಟ್ ಮಾಡಿದ್ದಾರೆ. ಖಾಸಗಿ ಪತ್ರಿಕೆಯೊಂದಕ್ಕೆ ನೀಡಿದ ಸಂದರ್ಶನದಲ್ಲಿ, ಶ್ರೀರಾಮ, ಹಿಂದೂತ್ವ ದೇಶದ ಆಸ್ತಿಯೇ ಹೊರತು ಬಿಜೆಪಿಯ ಸೊತ್ತಲ್ಲ ಎಂದು ಹೇಳಿಕೆ ಕೊಟ್ಟಿದ್ದರು.
ಇದೀಗ ಸಂದರ್ಶನ ಹೇಳಿಕೆಯನ್ನು ಉಲ್ಲೇಖಿಸಿ ಟ್ವೀಟ್ ಮಾಡಿದ ಡಿಕೆಶಿ, ನಾವು ರಾಮ ಮಂದಿರ ನಿರ್ಮಾಣಕ್ಕೆ ಯಾವತ್ತೂ ವಿರೋಧ ಮಾಡಿಲ್ಲ. ಶ್ರೀರಾಮ ಹಾಗೂ ಹಿಂದೂ ಧರ್ಮ ಈ ದೇಶದ ಆಸ್ತಿಯೇ ಹೊರತು ಒಂದು ಪಕ್ಷಕ್ಕೆ ಸೀಮಿತವಾದುದಲ್ಲ. ಬಿಜೆಪಿ ಮೊದಲಿನಿಂದಲೂ ಭಾವನೆಗಳ ಮೇಲೆ ರಾಜಕಾರಣ ಮಾಡುತ್ತಾ ಬಂದಿದೆ. ಅದಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಹೇಳಿದ್ದಾರೆ. ಒಟ್ಟಿನಲ್ಲಿ ರಾಮಮಂದಿರ ನಿರ್ಮಾಣಕ್ಕೆ ನಡೆಯುತ್ತಿರುವ ಶಿಲಾನ್ಯಾಸ ಕಾರ್ಯಕ್ರಮಕ್ಕೆ ದಿನಗಣನೆ ಇರುವಾಗಲೇ ಡಿಕೆಶಿ ನೀಡುತ್ತಿರುವ ಹೇಳಿಕೆ ರಾಜಕೀಯವಲಯಲ್ಲಿ ಚರ್ಚೆಗೆ ಕಾರಣವಾಗಿದೆ.
- Advertisement -