ವಿಟ್ಲ: ಕೋಟಿ ಕೋಟಿ ಭಾರತೀಯರ ಕನಸಾದ ಅಯೋಧ್ಯೆಯಲ್ಲಿ ಶ್ರೀರಾಮ ಮಂದಿರ ನಿರ್ಮಾಣದ ಭೂಮಿಪೂಜೆ ಸಂಪನ್ನಗೊಳ್ಳುತ್ತಿರುವ ಐತಿಹಾಸಿಕ ಸುಮುಹೂರ್ತದಲ್ಲಿ ಒಡಿಯೂರು ಶ್ರೀ ಗುರುದೇವದತ್ತ ಸಂಸ್ಥಾನದ ಶ್ರೀ ಗುರುದೇವಾನಂದ ಸ್ವಾಮಿಗಳವರು “ಶ್ರೀ ರಾಮಜನ್ಮಭೂಮಿ ಅಯೋಧ್ಯೆಯಲ್ಲಿ ಭವ್ಯ ರಾಮ ಮಂದಿರ ನಿರ್ಮಾಣ ಕಾರ್ಯ ನಿರ್ವಿಘ್ನವಾಗಿ ನಡೆಯಲಿ, ಈ ಐತಿಹಾಸಿಕ ದಿನದ ಸವಿನೆನಪಿಗಾಗಿ ಒಡಿಯೂರು ಶ್ರೀ ಸಂಸ್ಥಾನದ ಪರಿಸರದಲ್ಲಿ ’ಕದಂಬವನ’ವನ್ನು ನಿರ್ಮಿಸಲು ಚಾಲನೆ ನೀಡಿ, ಪ್ರಕೃತಿ ಸಂರಕ್ಷಣೆಯ ಸಂಕಲ್ಪ ಮಾಡಿ” ಅನುಗ್ರಹ ಸಂದೇಶ ನೀಡಿದರು.
ಸಾಧ್ವಿ ಶ್ರೀ ಮಾತಾನಂದಮಯೀ, ಒಡಿಯೂರು ಶ್ರೀ ವಜ್ರಮಾತಾ ಮಹಿಳಾವಿಕಾಸ ಕೇಂದ್ರದ ಅಧ್ಯಕ್ಷೆ ಸರ್ವಾಣಿ ಪಿ.ಶೆಟ್ಟಿ, ಒಡಿಯೂರು ಶ್ರೀ ಗ್ರಾಮವಿಕಾಸ ಯೋಜನೆಯ ಕರೋಪಾಡಿ ಗ್ರಾಮ ಸಮಿತಿಯ ಅಧ್ಯಕ್ಷ ರಘುನಾಥ ಶೆಟ್ಟಿ ಪಟ್ಲಗುತ್ತು, ವಗೆನಾಡು ಶ್ರೀ ಸುಬ್ರಾಯ ದೇವಸ್ಥಾನದ ನಿರ್ವಹಣಾ ಸಮಿತಿಯ ಅಧ್ಯಕ್ಷ ಶಿವಪ್ರಸಾದ್ ಶೆಟ್ಟಿ ಅನೆಯಾಲಗುತ್ತು, ಒಡಿಯೂರು ಶ್ರೀ ಗುರುದೇವ ವಿದ್ಯಾಪೀಠದ ಸಂಚಾಲಕ ಗಣಪತಿ ಭಟ್ ಸೇರಾಜೆ, ಪ್ರೌಢಶಾಲಾ ಮುಖ್ಯ ಶಿಕ್ಷಕ ಎ. ಜಯಪ್ರಕಾಶ್ ಶೆಟ್ಟಿ, ಪ್ರಾಥಮಿಕ ಶಾಲಾ ಮುಖ್ಯಶಿಕ್ಷಕಿ ರೇಣುಕಾ ಎಸ್.ರೈ, ಒಡಿಯೂರು ಶ್ರೀ ವಿವಿಧೋದ್ದೇಶ ಸೌಹಾರ್ದ ಸಹಕಾರಿಯ ನಿರ್ದೇಶಕರುಗಳಾದ ಪಿ. ಲಿಂಗಪ್ಪ ಗೌಡ, ತಾರಾನಾಥ ಶೆಟ್ಟಿ ಒಡಿಯೂರು, ಯಶವಂತ ವಿಟ್ಲ, ಸಂಸ್ಥಾನದ ಕಾರ್ಯನಿರ್ವಾಹಕ ಪದ್ಮನಾಭ ಒಡಿಯೂರು, ಒಡಿಯೂರು ಗುರುದೇವ ವಿದ್ಯಾಪೀಠದ ಶಿಕ್ಷಕ-ಶಿಕ್ಷಕಿಯರು ಹಾಗೂ ಸಂಸ್ಥಾನದ ಸಿಬ್ಬಂದಿಗಳು ಉಪಸ್ಥಿತರಿದ್ದರು.