- Advertisement -
- Advertisement -
ವರದಿ: ನ್ಯೂಸ್ ಡೆಸ್ಕ್, ವಿ ಟಿವಿ
ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಹಿನ್ನಲೆಯಲ್ಲಿ ಆಗಸ್ಟ್ 8ರಂದು ಶಿಲಾನ್ಯಾಸ ನಡೆಯಲಿದೆ. ಆದರೆ ಭೂಮಿ ಪೂಜೆ ಕಾರ್ಯಕ್ರಮ ತಡೆ ಕೋರಿ ಅಲಹಾಬಾದ್ ಹೈಕೋರ್ಟ್ ನಲ್ಲಿ ದೂರು ದಾಖಲಾಗಿದೆ.
ದೆಹಲಿ ಮೂಲದ ಸಾಕೇತ್ ಗೋಖಲೆ ಎಂಬುವವರು ದೂರು ನೀಡಿದ್ದಾರೆ. ಆ.5ಕ್ಕೆ ಶಿಲಾನ್ಯಾಸ ಕಾರ್ಯಕ್ರಮ ಹಮ್ಮಿಕೊಂಡಿರುವುದರಿಂದ ಕೋವಿಡ್-19 ನಿಯಮ ಉಲ್ಲಂಘನೆಯಾಗಿದೆ. ಈ ಕಾರ್ಯಕ್ರಮದಲ್ಲಿ ಸುಮಾರು 300 ಜನ ಸೇರುತ್ತಾರೆ. ಹೀಗಾಗಿ ಅನ್ ಲಾಕ್-2 ನಿಯಮಗಳಿಗೆ ವಿರುದ್ಧವಾಗಿದೆ.
ಸಾಮಾಜಿಕ ಅಂತರ ಕಾಪಾಡಬೇಕು ಎಂದು ಅರಿವು ಮೂಡಿಸುವರ ಸರ್ಕಾರವೇ ಅದನ್ನು ಉಲ್ಲಂಘನೆ ಮಾಡುವುದು ಸರಿಯಲ್ಲ. ಶಿಲಾನ್ಯಾಸ ಹೆಸರಲ್ಲಿ ಒಂದೆಡೆ ಜನ ಸೇರಿದರೆ ಅದರಿಂದ ಕೊರೊನಾ ಹರಡುವ ಸಾಧ್ಯತೆಯಿದೆ. ಹೀಗಾಗಿ ಮುಂಜಾಗ್ರತ ಕ್ರಮವಾಗಿ ಭೂಮಿಪೂಜೆಗೆ ತಡೆಕೋರಿ ಎಂದು ಹೈಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
- Advertisement -