Wednesday, July 22, 2026
spot_imgspot_img
spot_imgspot_img

ರಾಮನಗರ: ಭೀಕರ ರಸ್ತೆ ಅಪಘಾತ; ಮೂವರು ದುರ್ಮರಣ, ಓರ್ವನ ಸ್ಥಿತಿ ಗಂಭೀರ

- Advertisement -
- Advertisement -

ರಾಮನಗರ: ಕಾರು ಹಾಗೂ ಲಾರಿ ನಡುವೆ ಭೀಕರ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವ ಗಂಭೀರವಾಗಿ ಗಾಯಗೊಂಡಿರುವ ಘಟನೆ ಬೆಂಗಳೂರು-ಕನಕಪುರ ಮುಖ್ಯರಸ್ತೆಯ ಕಗ್ಗಲೀಪುರದ ಆಗರ ಕ್ರಾಸ್ ಬಳಿ ನಡೆದಿದೆ.

ಮೃತರನ್ನು ಸೈಯದ್ ಪಾಷ (22), ಯೂನಿಫ್ ಬಾನ್ (23), ಅಜರ್ ಪಾಷ (22) ಎಂದು ಗುರುತಿಸಲಾಗಿದೆ. ಫರಾಜ್ ಎಂಬವನಿಗೆ ಗಂಭೀರ ಗಾಯವಾಗಿದ್ದು, ಆತನಿಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಬೆಳಗ್ಗಿನ ಜಾವ 3 ಗಂಟೆಗೆ ಈ ಅಪಘಾತ ನಡೆದಿದ್ದು, ಕಾರಿನಲ್ಲಿ ಒಟ್ಟು ನಾಲ್ವರು ಸ್ನೇಹಿತರ ಪ್ರಯಾಣ ಮಾಡುತ್ತಿದ್ದರು. ಈ ವೇಳೆ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಕಾರು ಡಿಕ್ಕಿಯಾಗಿದೆ. ಡಿಕ್ಕಿಯ ರಭಸಕ್ಕೆ ಕಾರು ಸಂಪೂರ್ಣ ಜಖಂ ಆದ ಪರಿಣಾಮ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಸ್ಥಳಕ್ಕೆ ಕಗ್ಗಲೀಪುರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮೃತದೇಹಗಳನ್ನು ಮರಣೋತ್ತರ ಪರೀಕ್ಷೆಗೆ ರಾಜರಾಜೇಶ್ವರಿ ಆಸ್ಪತ್ರೆಗೆ ರವಾನೆ ಮಾಡಲಾಗಿದೆ ಎಂದು ತಿಳಿದುಬಂದಿದೆ.

- Advertisement -

Related news

error: Content is protected !!