- Advertisement -
- Advertisement -




ರಾಮನಗರ: ಕನಕಪುರ ತಾಲೂಕಿನ ಬಂಡೆಬಸಪ್ಪನದೊಡ್ಡಿ ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದ ಅಗ್ನಿ ಅವಘಡದಲ್ಲಿ ಮನೆಯೊಂದು ಸಂಪೂರ್ಣ ಸುಟ್ಟು ಕರಕಲಾಗಿದೆ.
ಗ್ರಾಮದ ಪರಮಶಿವಯ್ಯ ಅವರ ಮನೆಯಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಬೆಂಕಿ ಕಾಣಿಸಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಇಡೀ ಮನೆಗೆ ವ್ಯಾಪಿಸಿದೆ. ಬೆಂಕಿಯ ಕೆನ್ನಾಲಿಗೆಗೆ ಲಕ್ಷಾಂತರ ಮೌಲ್ಯದ ಗೃಹೋಪಯೋಗಿ ವಸ್ತುಗಳು, ದಿನಬಳಕೆ ಸಾಮಗ್ರಿಗಳು ಸಂಪೂರ್ಣ ನಾಶವಾಗಿವೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ, ಮನೆಯಲ್ಲಿದ್ದವರು ಸುರಕ್ಷಿತವಾಗಿ ಪಾರಾಗಿದ್ದಾರೆ. ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ. ಈ ಸಂಬಂಧ ಸಾತನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದು ತಿಳಿದುಬಂದಿದೆ.
- Advertisement -








