- Advertisement -
- Advertisement -



ರಾಮನಗರ: ವಿಳಾಸ ಕೇಳುವ ನೆಪವೊಡ್ಡಿ ಒಂದೇ ದಿನ ಮೂರು ಕಡೆ ಸರಗಳ್ಳತನ ಮಾಡಿದ ಮೂವರು ಆರೋಪಿಗಳನ್ನು ಮಾಗಡಿ ತಾಲೂಕಿನ ಕುದೂರು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಗಳನ್ನು ಪ್ರಭು (39), ವಸಂತಿ (37) ಮತ್ತು ಜ್ಯೋತಿ (32) ಎಂದು ಗುರುತಿಸಲಾಗಿದೆ. ಮಾ.3ರಂದು ಕುದೂರು ಸಮೀಪದ ಕಳ್ಳಿಪಾಳ್ಯದಲ್ಲಿ ಮೂವರು ಕಾರಿನಲ್ಲಿ ಬಂದು ವಿಳಾಸ ಕೇಳುತ್ತಾ ಚೈನ್ ಕದ್ದು ಎಸ್ಕೇಪ್ ಆಗಿದ್ದರು. ಮುನೇಶ್ವರ ಸ್ವಾಮಿ ರಥೋತ್ಸವಕ್ಕೆ ಹೋಗ್ತಿದ್ದ ಭಕ್ತರ ಬಳಿ, ದೇವಾಸ್ಥಾನಕ್ಕೆ ಹೋಗುವ ದಾರಿ ಕೇಳಿ ಅವರ ಸರಗಳನ್ನೂ ಕದ್ದು ಪರಾರಿಯಾಗಿದ್ದರು ಎನ್ನಲಾಗಿದೆ.
ಬಂಧಿತರಿಂದ 112 ಗ್ರಾಂ ತೂಕದ ಮೂರು ಚಿನ್ನದ ಸರ, ಕೃತ್ಯಕ್ಕೆ ಬಳಸಿದ್ದ ಒಂದು ವ್ಯಾಗನಾರ್ ಕಾರನ್ನು ಪೊಲೀಸರು ಜಪ್ತಿ ಮಾಡಿದ್ದಾರೆ. ಈ ಗ್ಯಾಂಗ್ ಒಟ್ಟು 7 ಕಳ್ಳತನ ಪ್ರಕರಣಗಳಲ್ಲಿ ಭಾಗಿಯಾಗಿತ್ತು ಎಂದು ತಿಳಿದು ಬಂದಿದೆ. ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.
- Advertisement -








