- Advertisement -
- Advertisement -





ರಾಮನಗರ: ಬೈಕ್‌ನಲ್ಲಿ ತೆರಳುತ್ತಿದ್ದ ವೇಳೆ ಯುವಕನ ಮೇಲೆ ಮರ ಬಿದ್ದ ಪರಿಣಾಮ ಯುವಕ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ರಾಮನಗರ ತಾಲೂಕಿನ ಹುಣಸನಹಳ್ಳಿ ಗ್ರಾಮದ ಬಳಿ ನಡೆದಿದೆ.
ಪ್ರಶಾಂತ್ (19) ಮೃತ ದುರ್ದೈವಿ. ರಾಮನಗರ ತಾಲೂಕಿನ ನಾಗೋಹಳ್ಳಿ ಗ್ರಾಮದ ಯುವಕ ಪ್ರಶಾಂತ್ ಕೆಲಸಕ್ಕೆಂದು ಮುಂಜಾನೆ ಮನೆಯಿಂದ ರಾಮನಗರಕ್ಕೆ ಬೈಕ್‌ನಲ್ಲಿ ತೆರಳುತ್ತಿದ್ದ. ಈ ವೇಳೆ ರಾತ್ರಿ ಸುರಿದ ಮಳೆಗೆ ಬುಡ ಸಮೇತ ಬೃಹತ್ ಮರ ಬೈಕ್ ಮೇಲೆ ಏಕಾಏಕಿ ಬಿದ್ದಿದೆ. ಮರ ಬಿದ್ದ ರಭಸಕ್ಕೆ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಮಗನನ್ನು ಕಳೆದುಕೊಂಡು ಪೋಷಕರ ಆಕ್ರಂದನ ಮುಗಿಲುಮುಟ್ಟಿದೆ.
ಘಟನಾ ಸ್ಥಳಕ್ಕೆ ರಾಮನಗರ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸದ್ಯ ಯುವಕನ ಮೃತದೇಹವನ್ನು ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ. ಘಟನೆ ಸಂಬಂಧ ರಾಮನಗರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
- Advertisement -








