Tuesday, July 23, 2024
spot_imgspot_img
spot_imgspot_img

ಮಾಜಿ ಸಚಿವ ಬಿ.ರಮಾನಾಥ ರೈ, ಮಾಜಿ ಶಾಸಕಿ ಶಕುಂತಳಾ ಟಿ.ಶೆಟ್ಟಿ ಸ್ವಯಂ ಕ್ವಾರಂಟೈನ್ ಗೆ

- Advertisement -G L Acharya panikkar
- Advertisement -

ವಿಟ್ಲ: ವಿಧಾನ ಪರಿಷತ್ ಮಾಜಿ ಸದಸ್ಯ ಐವನ್ ಡಿಸೋಜ ಅವರಿಗೆ ಕೊರೊನಾ ಸೋಂಕು ದೃಢಪಟ್ಟ ಹಿನ್ನೆಲೆ ಅವರ ಜೊತೆ ಪ್ರಾಥಮಿಕ‌ ಸಂಪರ್ಕದಲ್ಲಿದ್ದ  ಮಾಜಿ ಸಚಿವ ಬಿ.ರಮಾನಾಥ ರೈ  ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ. ನಾನು ಕೆಲ‌ವು ದಿನಗಳ ಕಾಲ ಸ್ವಯಂ‌ ಕ್ವಾರಂಟೈನ್ ಗೆ ಒಳಗಾಗಿದ್ದೇನೆ. ಆದ್ದರಿಂದ ಈಗಾಗಲೇ ನಿಗದಿಯಾಗಿರುವ ಜನ ಸಾಮಾನ್ಯರ ಭೇಟಿ, ಕ್ಷೇತ್ರದಲ್ಲಿ ನಿಗದಿಯಾಗಿದ್ದ ವಿವಿಧ ಕಾರ್ಯಕ್ರಮಗಳನ್ನು ರದ್ದುಗೊಳಿಸಿರುವುದಾಗಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. ಕ್ಷೇತ್ರದ ಜನರು ಯಾವುದೇ ಸಮಸ್ಯೆಗಳಿದ್ದರೆ ದೂರವಾಣಿ ಮೂಲಕ ನನ್ನನ್ನು ಸಂಪರ್ಕಿಸಬಹುದಾಗಿದೆ ಎಂದು ತಿಳಿಸಿದ್ದಾರೆ.

ಇದೇ ವೇಳೆ ಐವನ್ ಡಿಸೋಜ ಅವರ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದವರಿಗೆ ಕೆಮ್ಮು, ಜ್ವರ ಮುಂತಾದ ಸೋಂಕಿನ ಲಕ್ಷಣಗಳು ಕಂಡು ಬಂದಲ್ಲಿ ತಕ್ಷಣ ಪರೀಕ್ಷೆಗೆ ಒಳಗಾಗುವಂತೆ ಮನವಿ ಮಾಡಿದ್ದಾರೆ. ಜೊತೆಗೆ ಐವನ್ ಡಿಸೋಜ ಹಾಗೂ  ಕೋವಿಡ್ ಸೋಂಕಿತರೆಲ್ಲರೂ ಶೀಘ್ರದಲ್ಲಿ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದಿದ್ದಾರೆ. ಅದೇ ರೀತಿ ಪುತ್ತೂರು ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶಕುಂತಳಾ ಟಿ. ಶೆಟ್ಟಿಯವರು ಸ್ವಯಂ ಕ್ವಾರಂಟೈನ್ ಗೆ ಒಳಗಾಗಿದ್ದಾರೆ.

- Advertisement -

Related news

error: Content is protected !!