Friday, April 26, 2024
spot_imgspot_img
spot_imgspot_img

ನಿವೃತ್ತ ನ್ಯಾಯಮೂರ್ತಿ ಎಂ.ರಾಮಯಾಜೋಯಿಸ್ ನಿಧನ

- Advertisement -G L Acharya panikkar
- Advertisement -

ಬೆಂಗಳೂರು: ನಿವೃತ್ತ ನ್ಯಾಯಮೂರ್ತಿ ಎಂ.ರಾಮಯಾಜೋಯಿಸ್ ಇಂದು ಬೆಳಗ್ಗೆ ಹೃದಯಾಘಾತದಿಂದ ರಾಜಾಜಿ ನಗರದಲ್ಲಿರುವ ಸ್ವಗೃಹದಲ್ಲಿ ನಿಧನರಾಗಿದ್ದಾರೆ. ಅವರಿಗೆ 89 ವರ್ಷ ವಯಸ್ಸಾಗಿತ್ತು.

ಶಿವಮೊಗ್ಗ ಮೂಲದವರಾದ ರಾಮಾಜೋಯಿಸ್ ವಯೋಸಹಜ ಕಾಯಿಲೆಯಿಂದ ಬಳಲುತ್ತಿದ್ದರು.

ಪಂಜಾಬ್ ಮತ್ತು ಹರ್ಯಾಣ ಹೈಕೋರ್ಟ್ ನ ಮುಖ್ಯ ನ್ಯಾಯಮೂರ್ತಿಯಾಗಿ ಸೇವೆ ಸಲ್ಲಿಸಿದ್ದ ಅವರು ಸುಪ್ರಿಂಕೋರ್ಟ್ ನ ಹಿರಿಯ ನ್ಯಾಯವಾದಿಯೂ ಆಗಿದ್ದರು.

ಬಿಹಾರ ಮತ್ತು ಜಾರ್ಖಂಡ್ ನ ರಾಜ್ಯಪಾಲರಾಗಿ ಕಾರ್ಯನಿರ್ವಹಿಸಿದ್ದ ರಾಮಾಜೋಯಿಸ್ ಬಿಜೆಪಿಯಿಂದ ರಾಜ್ಯಸಭೆಗೆ ಆಯ್ಕೆಯಾಗಿದ್ದರು.

ಇಂದು ಸಂಜೆ 4 ಗಂಟೆಗೆ ಅಂತಿಮ ಸಂಸ್ಕಾರ ನೆರವೇರಲಿದ್ದು, ರಾಜಾಜಿ ನಗರದ ಅವರ ನಿವಾಸದಲ್ಲಿ ಪಾರ್ಥೀವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿದೆ.

ರಾಮಾ ಜೋಯಿಸ್ ನಿಧನಕ್ಕೆ ಜಲಸಂಪನ್ಮೂಲ ಸಚಿವ ರಮೇಶ್ ಜಾರಕಿಹೊಳಿ‌ ತೀವ್ರ ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

- Advertisement -

Related news

error: Content is protected !!