Thursday, April 18, 2024
spot_imgspot_img
spot_imgspot_img

ಕಾಂಗ್ರೆಸ್ ಗೆ ಮತ್ತೊಂದು ಶಾಕ್: ಸಕ್ರಿಯ ರಾಜಕಾರಣಕ್ಕೆ ರಮೇಶ್ ಕುಮಾರ್ ಗುಡ್ ಬೈ

- Advertisement -G L Acharya panikkar
- Advertisement -

ಕೋಲಾರ: ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತಿಯಾಗುತ್ತೇನೆ ಎಂದು ಮಾಜಿ ಸ್ಪೀಕರ್ ರಮೇಶ್ ಕುಮಾರ್ ಹೇಳಿದ್ದಾರೆ.

ಗ್ರಾಮ ಪಂಚಾಯಿತಿ ಚುನಾವಣೆ ಬಗ್ಗೆ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ ಹಾಗೂ ಮಾಜಿ ಸ್ವೀಕರ್ ರಮೇಶ್ ಕುಮಾರ್, ರಾಜ್ಯದಲ್ಲಿ ರಾಜಕೀಯ ವ್ಯವಸ್ಥೆಯೇ ಕಲುಷಿತಗೊಂಡಿದೆ. ಇಂದು ರಾಜಕಾರಣದಲ್ಲಿ ಮೌಲ್ಯಗಳು ಉಳಿದಿಲ್ಲ ಎಂದು ವಿಷಾದ ವ್ಯಕ್ತಪಡಿಸಿದರು.

ರಾಜಕೀಯ ಜೀವನದಲ್ಲಿ ಇಷ್ಟು ವರ್ಷ ನ್ಯಾಯಯುತವಾಗಿ ಬದುಕಿದ್ದೇನೆ. ಹಣ ತೆಗೆದುಕೊಂಡು ರಾಜಕೀಯ ಮಾಡಿಲ್ಲ. ಪಕ್ಷದ ಕೆಲವರು ಹಣಕ್ಕೆ ತಲೆ ಮಾರಿಕೊಂಡು ಬಿಜೆಪಿಗೆ ಹೋದರು. ತಾಯಿಯಂತಿರುವ ಪಕ್ಷಕ್ಕೆ ದ್ರೋಹ ಮಾಡಿದರು ಎಂದು ರಮೇಶ್ ಕುಮಾರ್ ಬೇಸರ ವ್ಯಕ್ತ ಪಡಿಸಿದರು.

ಅಧಿಕಾರದಾಸೆಗೆ ಅನೈತಿಕ ರಾಜಕಾಣ ಮಾಡುತ್ತಿದ್ದಾರೆ ಎಂದ ಅವರು ಮುಂಬರುವ ವಿಧಾನಸಭಾ ಚುನಾವಣೆಗೆ ಸ್ಪರ್ಧಿಸುವುದಿಲ್ಲ. ಗೌರವಯುತವಾಗಿ ಸಕ್ರಿಯ ರಾಜಕಾರಣದಿಂದ ನಿವೃತ್ತನಾಗುತ್ತೇನೆ ಎಂದು ಘೋಷಿಸಿದ್ದಾರೆ.

- Advertisement -

Related news

error: Content is protected !!