Saturday, April 27, 2024
spot_imgspot_img
spot_imgspot_img

ರಮೇಶ್ ಜಾರಕಿಹೊಳಿ ರಾಸಲೀಲೆ ಪ್ರಕರಣ: ಕಡೆಗೂ ಸಚಿವ ಸ್ಥಾನಕ್ಕೆ ರಾಜೀನಾಮೆ!!

- Advertisement -G L Acharya panikkar
- Advertisement -

ಬೆಂಗಳೂರು: ರಾಜಕೀಯದಲ್ಲಿ ಕೋಲಾಹಲ ಸೃಷ್ಟಿಸಿರುವ ಸಿ ಡಿ ಹಗರಣದ ಹಿನ್ನೆಲೆಯಲ್ಲಿ ನೀರಾವರಿ ಸಚಿವ ರಮೇಶ್ ಜಾರಕಿಹೊಳಿ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ರಾಜೀನಾಮೆ ಪತ್ರ ರವಾನಿಸಿದ್ದಾರೆ.


ದೆಹಲಿಯಲ್ಲಿ ಬಿಜೆಪಿ ಕರ್ನಾಟಕ ಉಸ್ತುವಾರಿ ಅರುಣ್ ಸಿಂಗ್ ಮತ್ತು ಬಿ ಎಲ್ ಸಂತೋಷ್ ನಡುವೆ ಮಹತ್ವದ ಮಾತುಕತೆ ನಡೆದ ಬಳಿಕ ಈ ಬೆಳವಣಿಗೆ ಸಂಭವಿಸಿದೆ.


ರಮೇಶ್​ ಜಾರಕಿಹೊಳಿ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ರಾಜ್ಯ ರಾಜಕೀಯದಲ್ಲಿ ಅಲ್ಲೋಲ-ಕಲ್ಲೋಲ ಸೃಷ್ಟಿಯಾಗಿದೆ. ಅಲ್ಲದೆ ರಾಜ್ಯ ಸರ್ಕಾರಕ್ಕೂ ಮುಜುಗರ ಉಂಟಾಗಿದ್ದು, ರಾಜೀನಾಮೆ ಪಡೆಯುವಂತೆ ವಿಪಕ್ಷಗಳಿಂದಲೂ ಆಗ್ರಹ ಕೇಳಿಬಂದಿತ್ತು.

- Advertisement -

Related news

error: Content is protected !!