Sunday, April 28, 2024
spot_imgspot_img
spot_imgspot_img

ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣ: ಇಬ್ಬರು ಶಂಕಿತರ ಬಗ್ಗೆ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಿಸಿದ ಎನ್‌ಐಎ

- Advertisement -G L Acharya panikkar
- Advertisement -

ಬೆಂಗಳೂರು: ರಾಮೇಶ್ವರಂ ಕೆಫೆ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರು ಶಂಕಿತರ ಬಗ್ಗೆ ಮಾಹಿತಿ ನೀಡಿದವರಿಗೆ 20 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಘೋಷಿಸಿದೆ.

ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಬಾಂಬ್ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೇ ಪ್ರಮುಖ ಆರೋಪಿಯಾದ ಮುಜಾಮುಲ್ ಶರೀಫ್ ನನ್ನು ಎನ್‌ಐಎ ಅಧಿಕಾರಿಗಳು ಬಂಧಿಸಿದ್ದಾರೆ. ಇದರ ಬೆನ್ನಲ್ಲೇ ಮತ್ತಿಬ್ಬರು ಆರೋಪಿಗಳ ಪೋಟೋ ಬಿಡುಗಡೆ ಮಾಡಿದ ತಂಡ ಇಬ್ಬರು ಶಂಕಿತರ ಬಗ್ಗೆ ಮಾಹಿತಿ ನೀಡಿದವರಿಗೆ 20 ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಘೋಷಿಸಿದೆ.

ಕೆಫೆಯಲ್ಲಿ ಸುಧಾರಿತ ಸ್ಫೋಟಕ (ಐಇಡಿ) ಅಳವಡಿಸಿದ ಶಂಕಿತ ಮುಸಾವಿರ್ ಹುಸೇನ್ ಶಾಜಿಬ್ ಮತ್ತು ಪ್ರಕರಣದಲ್ಲಿ ಸಂಚು ರೂಪಿಸಿದ ಅಬ್ದುಲ್ ಮಥೀನ್ ಅಹ್ಮದ್ ತಾಹಾ ಎಂಬ ಶಂಕಿತ ಆರೋಪಿಗಳ ಮಾಹಿತಿಗಾಗಿ ಎನ್‌ಐಎ ಬಹುಮಾನ ಘೋಷಿಸಿದೆ.

ಎರಡೂ ಶಂಕಿತರ ಬಗ್ಗೆ ಮಾಹಿತಿಯನ್ನು ಹೊಂದಿರುವ ಜನರು [email protected] ಇಮೇಲ್ ಮೂಲಕ ಅಥವಾ ಕರೆ ಮೂಲಕ ಏಜೆನ್ಸಿಯನ್ನು ಸಂಪರ್ಕಿಸಬಹುದು ಎಂದು ಹೇಳಿದೆ. ಮಾಹಿತಿ ನೀಡಿದವರ ಗುರುತನ್ನು ಗೌಪ್ಯವಾಗಿಡಲಾಗುವುದು ಎಂದು ಎನ್‌ಐಎ ತಿಳಿಸಿದೆ.

ಎನ್‌ಐಎ ತಂಡವು ಕರ್ನಾಟಕದ 12, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ 18 ಸ್ಥಳಗಳಲ್ಲಿ ಶೋಧ ಕಾರ್ಯಾಚರಣೆ ನಡೆಸಿದ ನಂತರ, ಮಾರ್ಚ್ 28 ರಂದು ಪ್ರಕರಣದ ಸಹ ಸಂಚುಕೋರರಲ್ಲಿ ಒಬ್ಬರಾದ ಮುಝಮ್ಮಿಲ್ ಶರೀಫ್ ಅವರನ್ನು ಬಂಧಿಸಿತ್ತು. ಘಟನೆಯಲ್ಲಿ ಭಾಗಿಯಾಗಿರುವ ಇತರ ಆರೋಪಿಗಳಿಗೆ ಶರೀಫ್ ವ್ಯವಸ್ಥಾಪನಾ ಬೆಂಬಲವನ್ನು ನೀಡಿದ್ದಾನೆ ಎಂದು ಎನ್ಐಎ ಹೇಳಿದೆ.

- Advertisement -

Related news

error: Content is protected !!