Saturday, April 27, 2024
spot_imgspot_img
spot_imgspot_img

ರಾಮೇಶ್ವರಂ ಕೆಫೆ​ ಬಾಂಬ್​ ಬ್ಲಾಸ್ಟ್​ ಪ್ರಕರಣ: ಪ್ರಮುಖ ಆರೋಪಿ ಅರೆಸ್ಟ್

- Advertisement -G L Acharya panikkar
- Advertisement -

ಬೆಂಗಳೂರಿನ ರಾಮೇಶ್ವರಂ ಕೆಫೆಯಲ್ಲಿನ ಬಾಂಬ್ ಬ್ಲಾಸ್ಟ್ ಪ್ರಕರಣದ ಮೊದಲ ಆರೋಪಿಯನ್ನು ಬಂಧಿಸಲಾಗಿದೆ. ಪ್ರಮುಖ ಆರೋಪಿಯ ಬಂಧನದ ಬಗ್ಗೆ ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್‌ಐಎ) ಟ್ವೀಟ್ ಮಾಡಿದ್ದು, ಬ್ಲಾಸ್ಟ್ ಪ್ರಕರಣದ ​ ಕೀ ಕಾಂನ್ಸಪರೇಟರ್​​​ ಆಗಿದ್ದ ಎಂದು ತಿಳಿಸಿದೆ.

ಬಾಂಬ್​ ತಯಾರಿಕೆಯ ಪ್ರಮುಖ ಆರೋಪಿ ಮುಜಾಮುಲ್​ ಶರೀಫ್ ಬಂಧಿತ ಆರೋಪಿ.

ಎನ್‌ಐಎ ಅಧಿಕಾರಿಗಳು 3 ರಾಜ್ಯಗಳ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದ್ದು, ಇದೀಗ ಪ್ರಮುಖ ಸಂಚುಕೋರನನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಕುರಿತಂತೆ ಟ್ವೀಟ್ ಮಾಡಿರುವ ಎನ್​ಐಎ ಆರೋಪಿಯನ್ನು ಬಂಧಿಸಿರುವುದಾಗಿ ಖಚಿತಪಡಿಸಿದೆ.

ರಾಜ್ಯದ 12 ಸ್ಥಳಗಳಲ್ಲಿ, ತಮಿಳುನಾಡಿನ 5 ಮತ್ತು ಉತ್ತರ ಪ್ರದೇಶದ 1 ಸೇರಿದಂತೆ ಒಟ್ಟು 18 ಸ್ಥಳಗಳಲ್ಲಿ ಎನ್‌ಐಎ ತಂಡಗಳು ದಾಳಿ ನಡೆಸಿತ್ತು. ದಾಳಿಯ ಬಳಿಕ ಆರೋಪಿ ಮುಜಾಮಿಲ್​ ಶರೀಫ್​ ನನ್ನು ಬಂಧಿಸಿರುವುದಾಗಿ ಎನ್‌ಐಎ ಟ್ವೀಟ್​ ಮಾಡಿದೆ.

ಪ್ರಕರಣದಲ್ಲಿ ಗುರುತಿಸಲಾದ ಇತರ ಇಬ್ಬರು ಆರೋಪಿಗಳಿಗೆ ಮುಜಾಮಿಲ್​ ಶರೀಫ್​ ಕೀ ಕಾಂನ್ಸಪರೇಟರ್​​​ ಆಗಿದ್ದ ಎಂದು ತನಿಖೆಯಿಂದ ತಿಳಿದುಬಂದಿದೆ. ಇನ್ನು ಬಂಧನದ ವೇಳೆ ಈತನ ಬಳಿ ಇದ್ದ ವಿವಿಧ ಸಾಧನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಎನ್​ಐಎ ಮಾಹಿತಿ ನೀಡಿದೆ.

- Advertisement -

Related news

error: Content is protected !!