- Advertisement -
- Advertisement -
ಶ್ರೀನಗರ: ಮಧ್ಯ ಕಾಶ್ಮೀರದ ಬುದ್ಧಾಂನಲ್ಲಿ 12ವರ್ಷದ ಬಾಲಕಿಯ ಮೇಲೆ ಅತ್ಯಾಚಾರವೆಸಗಿ, ಹತ್ಯೆ ಮಾಡಲಾಗಿದೆ. ಬಾಲಕಿಯು ಶನಿವಾರ ಕಣ್ಮರೆಯಾದ ಕೆಲವೇ ಗಂಟೆಗಳ ಅಂತರದಲ್ಲಿ ಮೃತದೇಹವು ಗ್ರಾಮದಲ್ಲಿ ಹೊಲದಲ್ಲಿ ಪತ್ತೆಯಾಗಿದೆ. ಇದರ ಬೆನ್ನಲ್ಲೇ, ಪ್ರಕರಣದ ಕುರಿತು ವಿಶೇಷ ತನಿಖಾ ತಂಡ ರಚಿಸಲಾಗಿದೆ.
ಬಾಲಕಿ ಮೇಲೆ ಅತ್ಯಾಚಾರವೆಸಗಿ, ಕೊಲೆ ಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.ಪ್ರಕರಣ ಸಂಬಂಧ ಐದು ಜನರ ವಿಶೇಷ ತನಿಖಾ ತಂಡ ರಚಿಸಲಾಗಿದೆ’ ಎಂದು ಬುಡ್ಡಾಂನ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ ಕೆ.ಕೆ. ಹರಿಪ್ರಸಾದ್ ತಿಳಿಸಿದ್ದಾರೆ.ಎಸ್‌ಐಟಿ ಘಟನಾ ನಡೆದ ಸ್ಥಳಕ್ಕೆ ಈಗಾಗಲೇ ಭೇಟಿ ನೀಡಿ ಸಾಕ್ಷ್ಯಗಳನ್ನು ಕಲೆಹಾಕಿದೆ.





- Advertisement -








