ಉಡುಪಿ: ಅಪ್ರಾಪ್ತ ಬಾಲಕಿಯನ್ನು ಅತ್ಯಾಚಾರಗೈದ ಆರೋಪದಲ್ಲಿ ರಾಷ್ಟ್ರೀಕೃತ ಬ್ಯಾಂಕ್‌ನ ಸಿಬಂದಿಯನ್ನು ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದೆ.

ಕಾಪುವಿನ ಬ್ಯಾಂಕ್ ಆಫ್ ಬರೋಡ ಶಾಖೆಯ ಆಟೆಂಡರ್, ಕುಕ್ಕಿಕಟ್ಟೆ ಮಂಚಿ ನಿವಾಸಿ ಸುಕೇಶ್ ಶೆಟ್ಟಿ(23) ಬಂಧಿತ ಆರೋಪಿಯಾಗಿದ್ದು, ಆರೋಪಿಯು ಹತ್ತನೆ ತರಗತಿಯ ಬಾಲಕಿಯನ್ನು ಪುಸಲಾಯಿಸಿ, ಮದುವೆಯಾಗುವುದಾಗಿ ನಂಬಿಸಿ ಅತ್ಯಾಚಾರಗೈದಿದ್ದ ಎಂದು ಉಡುಪಿ ಮಹಿಳಾ ಠಾಣೆಯಲ್ಲಿ ಬಾಲಕಿ ಪೋಷಕರು ದೂರು ನೀಡಿದ್ದಾರೆ.

ಬಾಲಕಿ ಹೆತ್ತವರು ಕೆಲಸಕ್ಕೆಯೆಂದು ತಮ್ಮ ಮನೆಯಿಂದ ಹೊರಗೆ ಹೋದ ಸಂದರ್ಭ ಸುಖೇಶ್ ಆರೋಪಿ ಬಾಲಕಿ ಮನೆಗೆ ಹೋಗುತ್ತಿದ್ದ ಎಂದು ದೂರಲಾಗಿದೆ. ಮಹಿಳಾ ಠಾಣಾ ಪೊಲೀಸರು ತನಿಖೆ ನಡೆಸಿ ಆರೋಪಿ ಸುಕೇಶ್ ಶೆಟ್ಟಿಯನ್ನು ಬಂಧಿಸಿ ನ್ಯಾಯಲಕ್ಕೆ ಹಾಜರು ಪಡಿಸಲಾಗಿದ್ದು, ನ್ಯಾಯಾಲಯವು ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಕೆಲ ಸಮಯದ ಹಿಂದೆ ಸುಕೇಶ್ ತನ್ನ ಸ್ನೇಹಿತರ ಜೊತೆ ಯುವತಿಯರೊಂದಿಗೆ ಅಸಭ್ಯವಾಗಿ ವರ್ತಿಸುತ್ತಿದ್ದಾಗ ಸ್ಥಳೀಯರ ಕೈಗೆ ಸಿಕ್ಕಿಬಿದ್ದರು. ನಂತರ ಇಲ್ಲಿನ ನಿವಾಸಿಗಳು ಎಚ್ಚರಿಕೆ ನೀಡಿ ಕಳುಹಿಸಿದ್ದರು ತಿಳಿದು ಬಂದಿದೆ.









