


ಬಂಟ್ವಾಳ: ಒಬ್ಬಂಟಿಯಾಗಿ ವಾಸ ಮಾಡುತ್ತಿದ್ದ 52 ರ ಹರೆಯದ ಮಹಿಳೆಯನ್ನು ಮನೆಯೊಳಗೆ ಕೂಡಿ ಹಾಕಿ ಹಲ್ಲೆ ನಡೆಸಿ ಬಲಾತ್ಕಾರವಾಗಿ ಅತ್ಯಾಚಾರ ಮಾಡಿದ್ದಲ್ಲದೆ ಕೊಲೆ ಬೆದರಿಕೆ ಒಡ್ಡಿದ ಘಟನೆ ಬಂಟ್ವಾಳ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯ ಸಿದ್ಧಕಟ್ಟೆ ಎಂಬಲ್ಲಿ ನಡೆದಿದೆ. ಆರೋಪಿಯ ವಿರುದ್ಧ ಗ್ರಾಮಾಂತರ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಅತ್ಯಾಚಾರ ಆರೋಪಿಯನ್ನು ಸಿದ್ಧಕಟ್ಟೆ ಅನಿಲ್ ಎನ್ನಲಾಗಿದೆ, ಪ್ರಸ್ತುತ ಆರೋಪಿಯು ತಲೆಮರೆಸಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಈ ಘಟನೆ ಅಗಸ್ಟ್ 11 ರಂದು ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ. ಅತ್ಯಾಚಾರಕ್ಕೊಳಗಾದ ಮಹಿಳೆ ಸಿದ್ಧಕಟ್ಟೆ ಸಂಗಬೆಟ್ಟು ನಿವಾಸಿಯಗಿದ್ದು ಕೂಲಿ ಕೆಲಸ ಮಾಡಿ ಜೀವನ ಸಾಗಿಸುವ ಬಡಪಾಯಿ ಮಹಿಳೆ ಎಂದು ತಿಳಿದು ಬಂದಿದೆ.
ಮಹಿಳೆಯು ಗಂಡನನ್ನು ಕಳೆದುಕೊಂಡು ಬಳಿಕ ಮಗಳೊಂದಿಗೆ ವಾಸವಾಗಿದ್ದರು ಆದರೆ ಕೆಲ ವರ್ಷಗಳ ಹಿಂದೆ ಮಗಳಿಗೆ ಮದುವೆಯಾಗಿದ್ದು, ಈಕೆ ಒಬ್ಬಂಟಿಯಾಗಿ ಕೂಲಿ ಕೆಲಸ ಮಾಡಿ ಜೀವನ ಸಾಗಿಸುತ್ತಿದ್ದರು. ಅಂತಹ ಬಡಪಾಯಿ ಮಹಿಳೆಗೆ ಹಲ್ಲೆ ನಡೆಸಿ ಅತ್ಯಾಚಾರ ಮಾಡಿ ಬಳಿಕ ಕೊಲ್ಲುವುದಾಗಿ ಬೆದರಿಕೆ ಹಾಕಿದ್ದಾನೆ ಎಂದು ಮಹಿಳೆ ದೂರಿನಲ್ಲಿ ತಿಳಿಸಿದ್ದಾರೆ.


