- Advertisement -
- Advertisement -
ಬೆಳ್ತಂಗಡಿ: ವೇಣೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 16 ವರ್ಷ ಪ್ರಾಯದ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಬಾಲಕಿಯನ್ನು ಗರ್ಭಿಣಿಯಾಗಿಸಿದ ಬಗ್ಗೆ ಬಾಲಕಿ ನೀಡಿದ ದೂರಿನಂತೆ ಪ್ರಕರಣ ದಾಖಲಿಸಲಾಗಿದೆ.

ಬಾಲಕಿ ವೇಣೂರು ಠಾಣಾ ವ್ಯಾಪ್ತಿಯಲ್ಲಿರುವ ತನ್ನ ಸಂಬಂಧಿಕರ ಮನೆಗೆ ಬಂದಿದ್ದು, ಆಕೆಯ ಅತ್ತೆಯ ಮಗ ಬಾಲಕಿಯನ್ನು ಪ್ರೀತಿಸುತ್ತಿದ್ದು ಮದುವೆಯಾಗುವುದಾಗಿ ನಂಬಿಸಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ಒತ್ತಾಯಪೂರ್ವಕವಾಗಿ ಲೈಂಗಿಕ ಸಂಪರ್ಕ ಮಾಡಿದ್ದಾನೆ.

ಇದಾದ ಬಳಿಕ ನಿರಂತರ ಲೈಂಗಿಕ ದೌರ್ಜನ್ಯ ನಡೆಸಿದ್ದಾನೆ. ಬಳಿಕ ಬಾಲಕಿ ಗರ್ಭಿಣಿಯಾಗಿದ್ದಾಳೆ. ಅನಾರೋಗ್ಯದ ಕಾರಣ ವೇಣೂರು ಸರಕಾರಿ ಆಸ್ಪತ್ರೆಗೆ ಬಂದ ವೇಳೆ ಬಾಲಕಿ ಗರ್ಭಿಣಿಯಾಗಿರುವುದು ತಿಳಿದು ಬಂದಿದೆ ಎಂದು ದೂರಿನಲ್ಲಿ ಆರೋಪಿಸಲಾಗಿದೆ. ಈ ಬಗ್ಗೆ ಬಾಲಕಿ ವೇಣೂರು ಪೊಲೀಸರಿಗೆ ದೂರು ನೀಡಿದ್ದಾರೆ. ಆರೋಪಿ ಅಮ್ಜತ್ ಖಾನ್ (18ವ) ವಿರುದ್ಧ ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.



- Advertisement -








