Sunday, June 29, 2025
spot_imgspot_img
spot_imgspot_img

ಅತ್ಯಾಚಾರ ಪ್ರಕರಣ; ನಟ ಮಡೆನೂರು ಮನುಗೆ 14 ದಿನ ನ್ಯಾಯಾಂಗ ಬಂಧನ..!

- Advertisement -
- Advertisement -

ಬೆಂಗಳೂರು: ಸಹ ಕಲಾವಿದೆಯ ಮೇಲೆ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ನಟ ಮಡೆನೂರು ಮನು ಜೈಲುಪಾಲಾಗಿದ್ದಾರೆ. ಕೋರ್ಟ್‌ 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.

5 ದಿನಗಳ ಪೊಲಿಸ್‌ ಕಸ್ಟಡಿ ಮುಗಿದ ಹಿನ್ನೆಲೆಯಲ್ಲಿ ಇಂದು ಅನ್ನಪೂರ್ಣೇಶ್ವರಿ ನಗರ ಠಾಣೆಯ ಪೊಲೀಸರು ನಗರ ಪ್ರಾಥಮಿಕ ಆರೋಗ್ಯ ಕೇಂದ್ರ ಮಲ್ಲತ್ತಹಳ್ಳಿಯಲ್ಲಿ ಮನುಗೆ ಮೆಡಿಕಲ್ ಟೆಸ್ಟ್ ಮಾಡಿಸಲಾಯಿತು.

ಮೆಡಿಕಲ್‌ ಟೆಸ್ಟ್‌ ನಡೆದ ಬಳಿಕ ಪೊಲೀಸರು ಮಧ್ಯಾಹ್ನ 3ನೇ ಎಸಿಎಂಎಂ ಕೋರ್ಟ್‌ಗೆ ಹಾಜರು ಪಡಿಸಿದರು. ಈ ವೇಳೆ ನ್ಯಾಯಾಧೀಶರು ಮನು ಪರ ವಕೀಲರಿಗೆ ಕೆಲ ಪ್ರಶ್ನೆ ಕೇಳಿದರು.

ಈ ಪ್ರಶ್ನೆಗೆ, ನನ್ನ ಕಕ್ಷಿದಾರರು ರಿಯಾಲಿಟಿ ಶೋನಲ್ಲಿ ಅಭಿನಯಿಸಿದ್ದಾರೆ. ಮದುವೆಯಾಗಿದೆ, ಆದರೆ ದೂರುದಾರೆ ಬೇರೆಯವರು ಎಂದು ಉತ್ತರ ನೀಡಿದರು.

ದೂರುದಾರೆಗೆ ಮದುವೆ ಆಗಿದ್ಯಾ ಎಂದು ಕೇಳಿದ್ದಕ್ಕೆ ಸಂತ್ರಸ್ತೆಯ ಪರ ವಕೀಲೆ ಮೊಬೈಲ್‌ನಲ್ಲಿರುವ ಕೆಲ ವಿಡಿಯೋವನ್ನು ನ್ಯಾಯಾಲಯಕ್ಕೆ ನೀಡಿದರು. ಅಂತಿಮವಾಗಿ ಕೋರ್ಟ್‌ 14 ದಿನಗಳ ಕಾಲ ಮನುವನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿತು.

- Advertisement -

Related news

error: Content is protected !!